ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ. ಮೂರ್ತಿ ಎಲ್. ಸದಸ್ಯರಾದ ಎಂ.ಹುAಬಯ್ಯ, ಸುನೀಲ್ ಎಂ ಉಕ್ಕಲಿ, ಎನ್.ದಿವಾಕರ್ ಮತ್ತು ಗೀತಾ ಥಾಂವಶಿ ಹಾಗೂ ಕಾರ್ಯದರ್ಶಿ ಡಾ. ಎಚ್.ಎಸ್. ಶಿವರಾಮು ಏ. ೨೮ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಏ. ೨೭ ರಂದು ಸಂಜೆ ಬೆಳಗಾವಿಯಿಂದ ವಿಜಯಪುರಕ್ಕೆ ಆಗಮಿಸುವರು. ಏ. ೨೮ ರಂದು ಬೆಳಗ್ಗೆ ೧೦.೨೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜರುಗುವ ಸಭೆಯಲ್ಲಿ ಸರ್ಕಾರದ ಎಲ್ಲ ಇಲಾಖೆಗಳಿಗೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಾಂಗಕ್ಕೆ ಅನುದಾನ ವಿತರಣೆಯಾಗಿರುವ ಮತ್ತು ಜನರ ಕುಂದುಕೊರತೆಗಳ ಬಗ್ಗೆ ಪರಿಶೀಲಿಸಲಿದ್ದಾರೆ.
ಮಧ್ಯಾಹ್ನ ೩ ಗಂಟೆಯಿಂದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು.
ಏ. ೨೯ ರಂದು ವಿಜಯಪುರದಿಂದ ಕಲಬುರಗಿಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.
ಈ ಸಭೆಯಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿವಿಧ ಸಂಘಟನೆ ಮುಖಂಡರುಗಳು ಮತ್ತು ಸಂಘ ಸಂಸ್ಥೆ ಪದಾಧಿಕಾರಿಗಳು ಹಾಜರಾಗಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
