ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ತಾಲೂಕು ವ್ಯಾಪ್ತಿಯ ಸಿದ್ದಾಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ಪಿಕೆಪಿಎಸ್) ಚುನಾವಣೆಯಲ್ಲಿ ಬಿಜೆಪಿ ಮುಖಂಡರಾದ ಏಗಪ್ಪ ಸವದಿ ಅವರು ಸತತ ನಾಲ್ಕನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಈ ಮೂಲಕ ಅವರು ತಮ್ಮ ಜನಪ್ರಿಯತೆ ಮತ್ತು ಸಂಘದ ಮೇಲಿನ ನಿಷ್ಠೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಏಗಪ್ಪ ಸವದಿ ಅವರು ಸಧ್ಯ ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಸಹಕಾರಿ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅವರ ನಾಯಕತ್ವದಲ್ಲಿ ಸಂಘದ ಅಭಿವೃದ್ಧಿಗೆ ಹಲವಾರು ಯೋಜನೆಗಳು ಜಾರಿಗೊಂಡಿವೆ ಎಂದು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚುನಾವಣೆಯಲ್ಲಿ ಮತದಾರರು ಭಾರೀ ಬೆಂಬಲ ನೀಡಿ ಅವರನ್ನು ಮತ್ತೆ ಆಯ್ಕೆ ಮಾಡಿರುವುದು, ಅವರ ಸೇವಾ ಮನೋಭಾವ ಮತ್ತು ಪ್ರಾಮಾಣಿಕ ಕಾರ್ಯಪದ್ಧತಿಗೆ ದೊರೆತ ಗೌರವವೆಂದು ವಿಶ್ಲೇಷಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಏಗಪ್ಪ ಸವದಿ ಅವರಿಗೆ ಶುಭ ಹಾರೈಸಿ ಸಂತೋಷ ವ್ಯಕ್ತಪಡಿಸಿದರು.

