Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೋಟಿ ವೃಕ್ಷ ಅಭಿಯಾನಕ್ಕೆ ಪುನಶ್ಚೇತನ :ಸಚಿವ ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ಕೋಟಿ ವೃಕ್ಷ ಅಭಿಯಾನಕ್ಕೆ ಪುನಶ್ಚೇತನ :ಸಚಿವ ಎಂ.ಬಿ.ಪಾಟೀಲ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೋಟಿ ವೃಕ್ಷ ಅಭಿಯಾನ ಅಂಗವಾಗಿ ವೃಕ್ಷೋತ್ಥಾನ ಹೆರಿಟೇಜ್ ರನ್ ಲಾಂಛನ ಅನಾವರಣ

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಕೋಟಿ ವೃಕ್ಷ ಅಭಿಯಾನ ಕಾರ್ಯಕ್ರಮ ಅಂಗವಾಗಿ ವೃಕ್ಷೋತ್ಥಾನ ಹೆರಿಟೇಜ್ ರನ್ ೨೦೨೩ರ ಲಾಂಛನ ಗುರುವಾರ ಅನಾವರಣಗೊಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿಸೆಂಬರ್ ೨೪ ರಂದು ಐತಿಹಾಸಿಕ ವಿಜಯಪುರದಲ್ಲಿ ಅರಣ್ಯೀಕರಣ ಅಭಿವೃದ್ಧಿಪಡಿಸುವುದರ ಜೊತೆಗೆ ಸ್ಮಾರಕಗಳ ಕುರಿತು ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ವೃಕ್ಷೋಥಾನ್ ಹೆರಿಟೇಜ್ ರನ್-೨೦೨೩ಅನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಪರಿಸರ ರಕ್ಷಣೆ ಜೊತೆಗೆ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಮಹತ್ವ ಕುರಿತು ಪರಿಣಾಮಕಾರಿಯಾಗಿ ಪ್ರಚಾರಗೊಳಿಸಲಾಗುವುದು. ಐತಿಹಾಸಿಕ ಸ್ಮಾರಕಗಳ ಮಹತ್ವದ ಕುರಿತು ಜನರಲ್ಲಿ ಆಸಕ್ತಿ ಮೂಡಿಸಿ, ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಜನರಲ್ಲಿ ಮರ ಬೆಳೆಸುವ ಪರಿಸರ ಉಳಿಸುವ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಸ್ಮಾರಕಗಳ ಸಂರಕ್ಷಣೆ ಮಹತ್ವ ಈ ಮೂಲಕ ಸಾರಲಾಗುತ್ತಿದೆ ಎಂದು ಹೇಳಿದರು.
ಈ ಹಿಂದೆ ಕೋಟಿವೃಕ್ಷ ಅಬಿಯಾನ ಆರಂಭಿಸಿ ಪ್ರತಿ ವರ್ಷ ೨೫ ಲಕ್ಷ ಸಸಿಳನ್ನು ನೆಟ್ಟು ೫ ವರ್ಷಗಳಲ್ಲಿ ಒಂದು ಕೋಟಿ ಗಿಡಗಳನ್ನು ವಿಜಯಪುರದಲ್ಲಿ ಮರಗಳನ್ನಾಗಿ ಬೆಳೆಸಬೇಕೆಂಬ ಉದಾತ್ತ ಮನೋಭಾವದಿಂದ ಕೋಟಿ ವೃಕ್ಷ ಆರಂಭಿಸಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಕೋಟಿ ವೃಕ್ಷ ಅಭಿಯಾನದಡಿ ಸಸಿಗಳ ಬೆಳೆಸುವಿಕೆ ಪ್ರಮಾಣ ಕುಂಠಿತಗೊಂಡು, ೨೦೧೭ರ ಮುಂಚೆ ಇದ್ದ ಸ್ಥಿತಿಯೇ ಮರುಕಳಿಸಿದೆ. ಅರಣ್ಯ ಬಲಪಡಿಸುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನಕ್ಕೆ ಪುನಶ್ಚೇತನ ನೀಡಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಹಲವು ವರ್ಷಗಳ ನಂತರ ಬರಗಾಲ ಎದುರಿಸುತ್ತಿದ್ದು, ಈ ಸಂದರ್ಭದಲ್ಲಿ ಕೋಟಿ ವೃಕ್ಷ ಅಭಿಯಾನವನ್ನು
ದೇಶದಲ್ಲಿಯೇ ಅತಿ ಹೆಚ್ಚು ಸ್ಮಾರಕಗಳನ್ನು ಹೊಂದಿರುವ ಎರಡನೇ ನಗರ ವಿಜಯಪುರದ ಐತಿಹಾಸಿಕ ಸ್ಮಾರಕಗಳ ಕುರಿತು ವ್ಯಾಪಕ ಪ್ರಚಾರ ಹಾಗೂ ಜಾಗೃತಿ ಮೂಡಿಸಿ, ಹೆಚ್ಚೆಚ್ಚೆ ಪ್ರವಾಸಿಗರನ್ನು ಜಿಲ್ಲೆಗೆ ಆಕರ್ಷಿಸುವ ನಿಟ್ಟಿನಲ್ಲಿ ವಿಜಯಪುರ ಪ್ರವಾಸೋದ್ಯಮ ಅಭಿವೃದ್ದಿ ಜೊತೆಗೆ ಜಿಲ್ಲೆಯ ಉದ್ದಿಮೆಗಳಿಗೆ, ವ್ಯಾಪಾರಕ್ಕೆ ಉತ್ತೇಜನ ದೊರೆಯಲಿರುವುದರಿಂದ ಈ ಬಾರಿ ಸ್ಮಾರಕಗಳ ರಕ್ಷಣೆ ಜೊತೆಗೆ ಪರಿಸರ ಜಾಗೃತಿ ಮೂಡಿಸಲು ಡಿ.೨೪ ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ವೃಕ್ಷೋತ್ಥಾನ ಹೆರಿಟೇಜ್ ರನ್-೨೦೨೩ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಡಿ.೨೪ ರಂದು ನಡೆಯುವ ಓಟದಲ್ಲಿ ೩,೫ ೧೦ ಮತ್ತು ೨೧ ಕಿ.ಮೀ.ಗಳ ಓಟ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಿಂದ ಆರಂಭಗೊಂಡು ಐತಿಹಾಸಿಕ ಸ್ಮಾರಕಗಳಾದ ಗೋಲಗುಂಬಜ್, ಗಗನಮಹಲ್, ನರಸಿಂಹ ದೇವಸ್ಥಾನ, ಬಾರಾಕಮಾನ ಹಾಗೂ ಮುಖ್ಯ ವೃತ್ತಗಳು, ಸೈನಿಕ ಶಾಲೆ, ಬಿಎಲ್‌ಡಿಇ ಡೀಮ್ಡ್ವಿವಿ ಆವರಣ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮಿಗಳ ಗದ್ದುಗೆ, ಶತಮಾನಗಳ ಇತಿಹಾಸವಿರುವ ಶ್ರೀ ಸಿದ್ದೇಶ್ವರ ದೇವಾಲಯದ ಮುಂದೆ ಓಟಗಳು ನಡೆಯಲಿವೆ.
ಶತಮಾನದ ಸಂತ ಜ್ಞಾನಯೋಗಿ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರಿಗೆ ಸಮರ್ಪಿತವಾದ ಈ ಓಟದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಹೊರ ಜಿಲ್ಲೆ, ರಾಜ್ಯಗಳಿಂದ ಅಂದಾಜು ೨ ರಿಂದ ೩ ಸಾವಿರ ಓಟಗಾರರು ಭಾಗವಹಿಸುವ ನಿರೀಕ್ಷೆ ಇದ್ದು, ಒಟ್ಟು ೧೦ ಸಾವಿರ ಜನರು ಈ ಓಟದಲ್ಲಿ ಭಾಗವಹಿಸಲಿದ್ದಾರೆ. ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ಈ ಓಟವನ್ನು ನಿರಂತರವಾಗಿ ಏರ್ಪಡಿಸಲಾಗುವುದು. ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವರು ಆನಲೈನ್ ನೋಂದಣಿ ಮಾಡಿಕೊಳ್ಳುವ ಮೂಲಕ ಆನ್ ಲೈನ್ ನೋಂದಣಿಗೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ಶಿಂಧೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ, ಪ್ರಾದೇಶಿಕ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆಬಿಜೆಎನ್‌ಎಲ್ ಅರಣ್ಯ ವಿಭಾಗದ ನಾಗಶೆಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.