ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಏಪ್ರೀಲ್ 27 ರಿಂದ ಮೇ 2ರ ವರೆಗೆ ಸೋಮವಾರದಿಂದ ಶನಿವಾರದ ವರೆಗೆ ನಿದ್ರಾಹೀನತೆ ಮತ್ತು ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಆಯೋಜಿಸಲಾಗಿದೆ.
ಆರು ದಿನ ಈ ಶಿಬಿರ ನಡೆಯಲಿದ್ದು, ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿರುವ 20 ರಿಂದ 50 ವರ್ಷದೊಳಗಿನವರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮೂಲಕ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ ಸಂಖ್ಯೆ: 8073518596 ಮತ್ತು 7030746226 ಸಂಪರ್ಕಿಸಬಹುದಾಗಿದೆ.
