ವಿಜಯಪುರ: ಕೈಮಗ್ಗ ಉತ್ಪನ್ನಗಳಿಂದ ತಯಾರಿಸಿದ ವಸ್ತುಗಳನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಳಸುವ ಮೂಲಕ ನೇಕಾರರನ್ನು ಪ್ರೋತ್ಸಾಹಿಸುವಂತೆ ಸಂಸದ ರಮೇಶ ಜಿಗಜಿಣಗಿ ಕರೆ ನೀಡಿದರು.
ಗುರುವಾರ ನಗರದ ಕೆ.ಇ.ಬಿ ಕಲ್ಯಾಣ ಮಂಟಪದಲ್ಲಿ ಅಭಿವೃದ್ಧಿ ಆಯುಕ್ತರು (ಕೈಮಗ್ಗ) ಜವಳಿ ಮಂತ್ರಾಲಯ ಭಾರತ ಸರ್ಕಾರ, ನೇಕಾರರ ಸೇವಾ ಕೇಂದ್ರ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಕೈಮಗ್ಗ ಪ್ರದರ್ಶನ ಹಾಗೂ ಮಾರಾಟ ಮೇಳ-೨೦೨೩ ‘ತಾನಾ-ಬಾನಾ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಕೈಮಗ್ಗಗಳಿಂದ ತಯಾರಿಸಿದ ಉತ್ಪನ್ನಗಳು ಹೆಚ್ಚು ಬಾಳಿಕೆ ಹಾಗೂ ಉತ್ತಮ ಗುಣಮಟ್ಟದಿಂದ ಕೂಡಿರುತ್ತವೆ. ಸಾರ್ವಜನಿಕರು ಇಂತಹ ಉತ್ಪನ್ನಗಳನ್ನು ಹೆಚ್ಚು ಹೆಚ್ಚು ಬಳಸಬೇಕು ನೇಕಾರರನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ನೇಕಾರರನ್ನು ಪ್ರೋತ್ಸಾಹಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಚರ್ಚಿಸಿ, ನೇಕಾರರ ಉಜ್ವಲ ಭವಿಷ್ಯಕ್ಕಾಗಿ ಉತ್ಪನ್ನ ಹಾಗೂ ಆದಾಯ ಹೆಚ್ಚಿಸಲು ಸಹಾಯ ಸಹಕಾರ ನೀಡುವುದಾಗಿ ಹೇಳಿದರು.
ಕೈಮಗ್ಗ ಪ್ರದರ್ಶನ ಹಾಗೂ ಮಾರಾಟ ಮೇಳವು ಅ.೧೯ ರಿಂದ ೨೫ರವೆಗೆ ನಡೆಯಲಿದ್ದು, ಈ ಮೇಳದಲ್ಲಿ ಸುಮಾರು ೨೫ಕ್ಕೂ ಹೆಚ್ಚು ಮಳಿಗೆಗಳಿದ್ದು ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ಇರಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬೆಂಗಳೂರು ವಿಭಾಗದ ಜಂಟಿ ನಿರ್ದೇಶಕರಾದ ಎನ್.ಟಿ.ನೆಗಳೂರ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ, ಸಹಾಯಕ ನಿರ್ದೇಶಕರಾದ ಎಸ್. ಮಾರಿಮುತ್ತು, ನೇಕಾರರ ಸೇವಾ ಸಂಘ ಬೆಂಗಳೂರು ಹಾಗೂ ವಿವಿಧ ಅಧಿಕಾರಿಗಳು, ಮಳಿಗೆದಾರರು ಹಾಗೂ ಇತರರು ಉಪಸ್ಥಿತರಿದ್ದರು.
ಕೈಮಗ್ಗ ಉತ್ಪನ್ನಗಳ ಬಳಸಿ ಪ್ರೋತ್ಸಾಹಿಸಲು ಸಂಸದ ಜಿಗಜಿಣಗಿ ಕರೆ
Related Posts
Add A Comment