ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ೦೫ ರಿಂದ ೧೭ ವರ್ಷದ ಒಟ್ಟು ೬೮,೦೦೦ ಮಕ್ಕಳ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ ಬಾಕಿ ಇದ್ದು, ಈ ಮಕ್ಕಳ ಬಯೋಮೆಟ್ರಿಕ್ ಅನ್ನು ಸೆ. ೩೦ರೊಳಗೆ ಉಚಿತವಾಗಿ ಮಾಡಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಔದ್ರಾಮ ಅವರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲ ಆಧಾರ್ ಕೇಂದ್ರಗಳಲ್ಲಿ ಸೆ. ೩೦ ರವರೆಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿರುತ್ತದೆ. ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ತಮ್ಮ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಿಸಿಕೊಳ್ಳಬಹುದಾಗಿದೆ ಎಂದವರು ತಿಳಿಸಿದ್ದಾರೆ.
ಕಾಲೋಚಿತಗೊಳಿಸುವುದರಿಂದ (ಅಪ್ಡೇಟ್) ಮಾಡುವುದರಿಂದ ಮಕ್ಕಳ ಶಾಲೆಯ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರದ ವಿವಿಧ ಯೋಜನೆಗಳು, ವಿದ್ಯಾರ್ಥಿ ವೇತನ, ತರಬೇತಿಗಳು ಸೇರಿದಂತೆ ಇತ್ಯಾದಿ ಯೋಜನೆಗಳ ಲಾಭ ಪಡೆಯಲು ಅನುಕೂಲವಾಗಲಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹಾಗಾಗಿ ಜಿಲ್ಲೆಯ ಎಲ್ಲ ಪೋಷಕರು ೫ ರಿಂದ ೧೭ ವಯೋಮಿತಿಯ ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ ಡೇಟ್ ಪ್ರಕ್ರಿಯೆ ಯನ್ನು ಜವಾಬ್ದಾರಿಯಿಂದ ನಿರ್ವಹಿಸಿ ತಮ್ಮ ಮಕ್ಕಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕು ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

