ವಿಜಯಪುರ: ನಗರ ಮಹಾನಗರ ಪಾಲಿಕೆಯ ೨೧ನೇ ಅವಧಿಗೆ ಮಹಾಪೌರ ಹಾಗೂ ಉಪಮಹಾಪೌರ ಸ್ಥಾನಗಳ ಆಯ್ಕೆಗೆ ಅಕ್ಟೋಬರ್ ೩೦ರಂದು ಚುನಾವಣೆ ನಡೆಸಲು ವಿಜಯಪುರ ಮಹಾನಗರ ಪಾಲಿಕೆ (ಚುನಾವಣೆ) ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಎಸ್.ಬಿ.ಶೆಟ್ಟೆಣ್ಣವರ ಚುನಾವಣೆ ವೇಳಾಪಟ್ಟಿ ನಿಗದಿಗೊಳಿಸಿದ್ದಾರೆ.
ಮಹಾಪೌರ ಸ್ಥಾನವು ಸಾಮಾನ್ಯ ವರ್ಗಕ್ಕೆ ಹಾಗೂ ಉಪ ಮಹಾಪೌರ ಸ್ಥಾನವು ಪರಿಶಿಷ್ಟ ಪಂಗಡ ವರ್ಗಕ್ಕೆ ಮೀಸಲಿರಿಸಿದೆ. ವಿಜಯಪುರ ಮಹಾನಗರ ಪಾಲಿಕೆ ಸಭಾಗೃಹದಲ್ಲಿ ಚುನಾವಣೆ ನಡೆಯಲಿದೆ.
ವಿಜಯಪುರ ಮಹಾನಗರ ಪಾಲಿಕೆ ಮಹಾಪೌರ ಹಾಗೂ ಉಪಮಹಾಪೌರ ಆಯ್ಕೆಗೆ ಚುನಾವಣಾ ವೇಳಾಪಟ್ಟಿಯಂತೆ ಅಕ್ಟೋಬರ್ ೩೦ರಂದು ಬೆಳಿಗ್ಗೆ ೯ ರಿಂದ ೧೧ ಗಂಟೆಯರೆಗೆ ನಾಮಪತ್ರಗಳ ಸ್ವೀಕಾರ, ಮಧ್ಯಾಹ್ನ ೧ ಗಂಟೆಯ ನಂತರ ಸಭೆ ಆರಂಭಿಸಿ, ಪ್ರಮಾಣ ವಚನ, ಹಾಜರಾತಿ, ಕೋರಂ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ಮತಗಳ ಏಣಿಕೆ ಹಾಗೂ ಫಲಿತಾಂಶ ಘೋಷಣೆ ಪ್ರಕ್ರಿಯೆಗಳು ಜರುಗಲಿವೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾನಗರ ಪಾಲಿಕೆ ಮಹಾಪೌರ-
ಉಪಮಹಾಪೌರ ಆಯ್ಕೆಗೆ ಅ.೩೦ರಂದು ಚುನಾವಣೆ
Related Posts
Add A Comment