ವಿಜಯಪುರ: ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನವೆಂಬರ್ ೧ ರಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮಾಡಲು ಉದ್ದೇಶಿಸಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಲೆ, ಸಾಹಿತ್ಯ ರಂಗಭೂಮಿ, ಸುಗಮ ಸಂಗೀತ, ಜನಪದ ಸಂಗೀತ, ಶಿಲ್ಪಕಲೆ, ನೃತ್ಯ, ಚಿತ್ರಕಲೆ, ಸಮಾಜ ಸೇವೆ, ಕೃಷಿ ವೈದ್ಯಕೀಯ, ಪತ್ರಿಕೋದ್ಯಮ ಹಾಗೂ ಸಂಕೀರ್ಣ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರು ವಿವರನ್ನೊಳಗೊಂಡು ತಮ್ಮ ಸ್ವಪರಿಚಯ ಮತ್ತು ದಾಖಲೆಗಳೊಂದಿಗೆ ದಿನಾಂಕ : ೨೫-೧೦-೨೦೨೩ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಶನ್ ರಸ್ತೆ, ವಿಜಯಪುರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ೦೮೩೫೨-೨೫೧೨೬೧ ಸಂಖ್ಯೆಗೆ ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment