ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೫-೨೦೨೬ ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್ ಗೆ ೮ ಸಾವಿರ ರೂ.ಗಳಂತೆ ಖರೀದಿಸಲಾಗುತ್ತಿದೆ. ಖರೀದಿ ಅವಧಿಯನ್ನು ಮೇ ೧೮ ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಖರೀದಿ ಅವಧಿ ಮಾ. ೩೧ಕ್ಕೆ ಮುಕ್ತಾಯಗೊಂಡಿದ್ದು, ಸರ್ಕಾರದ ಆದೇಶದಲ್ಲಿ ತೊಗರಿ ಉತ್ಪನ್ನವನ್ನು ಖರೀದಿಸುವ ಅವಧಿಯನ್ನು ಮೇ ೧೮ ರವರೆಗೆ ವಿಸ್ತರಿಸಿ ಈ ಮೊದಲು ನೋಂದಾಯಿಸಿದ ರೈತರಿಂದ ಮಾತ್ರ ಖರೀದಿಸುವ ನಿರ್ದೇಶನವಿದೆ.
ಹಾಗಾಗಿ ವಿಸ್ತರಿಸಲಾದ ದಿನಾಂಕದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
