Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇಂದ್ರಕ್ಕೆ ಲಿಂಗಾಯತ ಧರ್ಮ ಕುರಿತು ಮರು ಮೇಲ್ಮನವಿ ಸಲ್ಲಿಸಲು ಆಗ್ರಹ
(ರಾಜ್ಯ ) ಜಿಲ್ಲೆ

ಕೇಂದ್ರಕ್ಕೆ ಲಿಂಗಾಯತ ಧರ್ಮ ಕುರಿತು ಮರು ಮೇಲ್ಮನವಿ ಸಲ್ಲಿಸಲು ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಿಳಾ ವಿವಿಯಲ್ಲಿ ಬಸವ ಅಧ್ಯಯನ ಪೀಠ ಪೂರ್ಣ ಪ್ರಮಾಣದಲ್ಲಿ ಸ್ಥಾಪನೆಯಾಗಬೇಕು | ಶುಭ್ರ ವಸ್ತ್ರಧಾರಿಣಿ ಅಕ್ಕಮಹಾದೇವಿ ಪುತ್ಹಳಿ ನಿಲ್ಲಿಸಬೇಕು | ಬಸವ ತಿಳಿವಳಿಕೆ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ & ಪದಾಧಿಕಾರಿಗಳಿಂದ ಜಿಲ್ಲಾಧಿಕಾರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಹಾಗೂ ಅಲ್ಪಸಂಖ್ಯಾತ ಸ್ಥಾನಮಾನ ನೀಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ನೇತೃತ್ವದಲ್ಲಿ ಪದಾಧಿಕಾರಿಗಳು, ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಮೂರ್ತಿ ನಾಗಮೋಹನದಾಸ ವರದಿಯಾಧಾರಿತ ತಮ್ಮ ಹಿಂದಿನ ಸರಕಾರದ ಶಿಫಾರಸನ್ನು ಸದೃಡಗೊಳಿಸಿ ಲಿಂಗಾಯತ ಧರ್ಮೀಯರನ್ನು ಅಲ್ಪಸಂಖ್ಯಾತ ಎಂದು ಪರಿಗಣಿಸಲು ಮತ್ತೆ ಕೇಂದ್ರ ಸರ್ಕಾರಕ್ಕೆ ಮರು ಮೇಲ್ಮನವಿ ಸಲ್ಲಿಸಿ ಬಸವಣ್ಣನವರಿಗೆ, ಲಿಂಗಾಯತರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ನಗರದಲ್ಲಿರುವ ನಾಡಿನ ಏಕಮೇವ ಮಹಿಳಾ ವಿಶ್ವವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠವನ್ನು ಪೂರ್ಣ ಪ್ರಮಾಣದಲ್ಲಿ ಸ್ಥಾಪಿಸಿ ಹೆಚ್ಚಿನ ಆರ್ಥಿಕ ಅನುದಾನವನ್ನು ನೀಡಿ ಶರಣ ಸಾಹಿತ್ಯದ ಸಂಶೋಧನೆ, ಪರಿಷ್ಕರಣೆ ಪ್ರಕಟಣೆಗೆ ತ್ವರಿತವಾಗಿ ಕಾರ್ಯ ರೂಪಿಸಬೇಕು. ಅಲ್ಲದೆ, ದಿಟ್ಟ ಶರಣೆ ಅಕ್ಕಮಹಾದೇವಿ ಶರಣ ಸಂಕುಲದ ಶ್ರೇಷ್ಠ ಅನುಭಾವಿಯಾಗಿದ್ದು, ಅವಳು ಅರೆಬೆತ್ತಲೆಯಾಗಿ ಬಂದಿಲ್ಲ ಎನ್ನುವುದಕ್ಕೆ ಹಲವು ಉಲ್ಲೇಖ, ಪುರಾವೆಗಳಿದ್ದು ಅಕ್ಕಮಹಾದೇವಿಯನ್ನು ಹೀಗೆ ಅರೆಬೆತ್ತಲೆಯಾಗಿ ಚಿತ್ರಿಸಿ ಹೆಣ್ಣು ಕುಲಕ್ಕೆ, ನಾಗರಿಕ ಸಮಾಜವು ತಲೆತಗ್ಗಿಸುವಂತೆ ಆಗಿದೆ. ಕಾರಣ ಅಕ್ಕಮಹಾದೇವಿ ವಿವಿಯಲ್ಲಿರುವ ಅರೆಬೆತ್ತಲೆ ಪುತ್ಹಳಿ ತೆರವುಗೊಳಿಸಿ ಆ ಸ್ಥಳದಲ್ಲಿ ಶುಭ್ರ ವಸ್ತ್ರಧಾರಿಣಿ ಅಕ್ಕಮಹಾದೇವಿ ಪುತ್ಹಳಿ ನಿಲ್ಲಿಸಬೇಕು ಎಂದು ಡಾ.ಪಟ್ಟಣ ಒತ್ತಾಯಿಸಿದರು.
ಈ ವಿಷಯವಾಗಿ ಈ ಹಿಂದೆ ಹೋರಾಟ ನಡೆಸಿ, ಮನವಿ ಸಲ್ಲಿಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಈಗಲೂ ತಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋರಾಟದ ಹಾದಿ ತುಳಿಯಬೇಕಾಗುತ್ತದೆ ಎಂದು ಪದಾಧಿಕಾರಿಗಳು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ
ಡಾ.ಸರಸ್ವತಿ ಪಾಟೀಲ, ರೇಣುಕಾ ಪಾಟೀಲ, ಆರ್.ಎಸ್. ಬಿರಾದಾರ, ರತ್ನಕ್ಕ ಬಿರಾದಾರ, ಸಿದ್ಪಪ್ಪ ಪಡನಾಡ, ಉದ್ಯಮಿ ಗಂಗಾಧರ ಸಾಲಕ್ಕಿ, ಶರಣು ಸಬರದ, ಆರ್.ಎಸ್.ಪಾಟೀಲ, ಮಲ್ಲಿಕಾರ್ಜುನ ಮುರಗೋಡ, ಸಂಖ ಸರ್, ಶೈಲಾ ಇಂದುಶೇಖರ ಮಣೂರ, ಡಾ.ಶಾರದಾಮಣಿ ಹುಣಶ್ಯಾಳ, ರೇಖಾ ಬಿರಾದಾರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026

ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ

ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ

ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 14, 2026
    In ದಿನಪತ್ರಿಕೆ
  • ಕೋವಿಡ್ ಸಂದರ್ಭ ಸೇವೆಗೈದ ಆಯುಷ್ಯ ವೈದ್ಯರ ನೇಮಕವಾಗಲಿ
    In (ರಾಜ್ಯ ) ಜಿಲ್ಲೆ
  • ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ೨(ಈ) ಮಾನ್ಯತೆ
    In (ರಾಜ್ಯ ) ಜಿಲ್ಲೆ
  • ಶಿವನ ಉರಿಗಣ್ಣನ್ನು ಪಡೆದು ಲೋಕೋದ್ಧಾರ ಮಾಡಿದ ಶಿವದಾಶಿಮಯ್ಯ
    In (ರಾಜ್ಯ ) ಜಿಲ್ಲೆ
  • ಜೂ.30ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡದಿದ್ದರೆ ಹೋರಾಟದ ಎಚ್ಚರಿಕೆ
    In (ರಾಜ್ಯ ) ಜಿಲ್ಲೆ
  • ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಅಮೃತ ೨ ಯೋಜನೆಯಡಿ ರೂ.೩.೦೪ಕೋಟಿ ಮಂಜೂರು :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಎಸ್.ಕೆ ಹೂಗಾರಗೆ ಪಿಎಚ್ಡಿ ಪದವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.