ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಗ್ರಾಮದ ಆದರ್ಶ ಆಂಗ್ಲ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ೨೦೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಆಂಗ್ಲ ಮಾಧ್ಯಮದ ಕುಮಾರಿ ಆರೀಫಾ ಮುಲ್ಲಾ ೬೧೮ (೯೮.೮೮%) ಪ್ರಥಮ ಸ್ಥಾನ ಪಡೆದಿದ್ದು, ಕುಮಾರಿ ಸುಹಾನಾ ಸಿ. ೬೦೭ (೯೭.೧೨%) ದ್ವಿತೀಯ ಸ್ಥಾನ ಹಾಗೂ ಕುಮಾರಿ ಭೂಮಿಕಾ ದಿಗ್ಗಾಂವಿ ೬೦೪ (೯೬.೬೪%) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪರೀಕ್ಷೆಗೆ ಆಂಗ್ಲ ಮಾಧ್ಯಮದ ಒಟ್ಟು ೯೪ ವಿಧ್ಯಾರ್ಥಿಗಳು ಹಾಜರಾಗಿದ್ದು ಅದರಲ್ಲಿ ೩೬ ವಿಧ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ೪೪ ವಿದ್ಯಾರ್ಥಿಗಳು ಪ್ರಥಮಶ್ರೇಣಿ, ೦೮ ವಿಧ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ೦೬ ವಿಧ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದು, ಕನ್ನಡ ಮಾಧ್ಯಮದ ಪರೀಕ್ಷೆಗೆ ಹಾಜರಾದ ಒಟ್ಟು ೪೦ ವಿದ್ಯಾರ್ಥಿಗಳಲ್ಲಿ ೧೨ ವಿಧ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ೧೯ ವಿದ್ಯಾರ್ಥಿಗಳು ಪ್ರಥಮಶ್ರೇಣಿ, ೦೮ ವಿಧ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ ೦೧ ವಿಧ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದು, ಶಾಲೆಯ ಓಟ್ಟು ಪಲಿತಾಂಶ ಶೇ.೧೦೦ ರಷ್ಟಾಗಿದೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಮುಖ್ಯಗುರುಗಳು ಸೇರಿದಂತೆ ಶಾಲೆಯ ಸಿಬ್ಬಂದಿ ವರ್ಗ ಮೆಚ್ಚುಗೆ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಶುಭಕೋರಿದ್ದಾರೆ.

