ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಪಟ್ಟಣದ ಪತ್ರಕರ್ತ ಈರಯ್ಯ ಗಣಕುಮಾರ ಅವರ ಪುತ್ರ ಶ್ರೀಹರ್ಷ ಈರಯ್ಯ ಗಣಕುಮಾರ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.
ಶ್ರೀ ಸಂಗಮೇಶ್ವರ ವಿದ್ಯಾವರ್ಧಕ ಸಂಘದ ಶ್ರೀ ಸಂಗಮೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿರುವ ಶ್ರೀಹರ್ಷ ಅವರು ಒಟ್ಟು 565 ಅಂಕಗಳನ್ನು ಪಡೆದು ಶೇಕಡಾ 90.40 ಫಲಿತಾಂಶದೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ವಿಶೇಷವಾಗಿ ಸಮಾಜ ವಿಜ್ಞಾನ ಮತ್ತು ಹಿಂದಿ ವಿಷಯಗಳಲ್ಲಿ 100ಕ್ಕೆ 100 ಅಂಕಗಳನ್ನು ಗಳಿಸಿರುವುದು ಅವರ ಸಾಧನೆಯನ್ನು ಇನ್ನಷ್ಟು ಮೆರಗು ನೀಡಿದೆ.
ಈ ಸಾಧನೆಗೆ ಪಟ್ಟಣದ ನಾಗರಿಕರು, ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪತ್ರಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.

