ಮೈಸೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕರ್ನಾಟಕವನ್ನು ಆರ್ಥಿಕ ಸಂಕಷ್ಟದತ್ತ ತಳ್ಳುತ್ತಿವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಬಸವನಪುರದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,
ರಾಜ್ಯದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ರೂ.2,000 ನೀಡಲಾಗುತ್ತಿದೆ. ಆದರೆ ಈ ಹಣವನ್ನು ಸರ್ಕಾರ ಹೇಗೆ ಸಂಗ್ರಹಿಸುತ್ತಿದೆ ಎಂಬುದನ್ನು ಜನರು ಪರಿಶೀಲಿಸಬೇಕು ಎಂದು ಹೇಳಿದರು.
“ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಕ್ಕಾಗಿ ಸರ್ಕಾರ ಲಕ್ಷಾಂತರ ಕೋಟಿ ರೂಪಾಯಿ ಸಾಲ ಪಡೆದಿದೆ. ಈಗಾಗಲೇ ರಾಜ್ಯದ ಒಟ್ಟು ಸಾಲ ರೂ.7.26 ಲಕ್ಷ ಕೋಟಿಗೆ ಏರಿದ್ದು, ಪ್ರತಿ ನಾಗರಿಕನ ಮೇಲೂ ಸುಮಾರು ರೂ.1 ಲಕ್ಷದಷ್ಟು ಸಾಲದ ಹೊರೆ ಬಿದ್ದಿದೆ ಎಂದು ಆರೋಪಿಸಿದರು.
ಈ ವಿಚಾರದಲ್ಲಿ ನಾನು ಯಾವುದೇ ವೇದಿಕೆಯಲ್ಲಿ ಚರ್ಚೆಗೆ ಬರಲು ನಾವು ಸಿದ್ಧನಿದ್ದೇನೆ. ಅವರಿಗೆ ಧೈರ್ಯವಿದ್ದರೆ, ಮುಂದಕ್ಕೆ ಬರಲಿ ಎಂದು ಸವಾಲು ಹಾಕಿದರು.
ರಾಜ್ಯದ ಖಜಾನೆ ಮೇಲೆ ಈ ಯೋಜನೆಗಳಿಂದ ಭಾರೀ ಒತ್ತಡ ಉಂಟಾಗಿದೆ. ಸರ್ಕಾರಿ ನೌಕರರ ವೇತನವನ್ನು ಸಮಯಕ್ಕೆ ಪಾವತಿಸಲು ಕೂಡ ಸರ್ಕಾರ ಹೆಣಗಾಟ ನಡೆಸುತ್ತಿದೆ. ಹಿಮಾಚಲ ಪ್ರದೇಶದಲ್ಲೂ ಇದೇ ರೀತಿಯ ಪರಿಸ್ಥಿತಿ ಉದ್ಭವಿಸಿದೆ, ಅಲ್ಲಿ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಭರವಸೆಯ ಮೇರೆಗೆ ಅಧಿಕಾರಕ್ಕೆ ಬಂದಿದ್ದು, ನಂತರ ರಾಜ್ಯದ ಹಣಕಾಸು ಸ್ಥಿತಿಯನ್ನು ದುರ್ಬಲಗೊಳಿಸಿದೆ. ಕರ್ನಾಟಕವೂ ಇದೇ ರೀತಿಯ ಬಿಕ್ಕಟ್ಟನ್ನು ಎದುರಿಸಬಹುದು ಎಂದು ಕಳವಳ ವ್ಯಕ್ತಪಡಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment

