ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನಗಳನ್ನು ಪ್ರಕರಣ ೫(೧) ರಂತೆ ನಿಗದಿಪಡಿಸಿ ದಿನಾಂಕ :೧೮-೦೪-೨೦೨೬ ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಹೊರಡಿಸಲಾದ ಕರಡು ಪ್ರಕಟಣೆಗೆ ಸಾರ್ವಜನಿಕರು ಆಕ್ಷೇಪಣೆಯನ್ನು ಸಲ್ಲಿಸುವ ಅವಧಿಯನ್ನು ಮೇ ೨ ರಂದು ಸಂಜೆ ೫:೩೦ ಗಂಟೆಯವರೆಗೆ ವಿಸ್ತರಿಸಲಾಗಿದೆ.
ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯ ಕುರಿತಂತೆ, ಸ್ವೀಕರಿಸಿದ ಆಕ್ಷೇಪಣೆ, ಅಹವಾಲುಗಳ ಬಗ್ಗೆ ಏ. ೨೭ ರಂದು ನಿಗದಿಪಡಿಸಿದ ಪರಿಶೀಲನಾ ಅದಾಲತ್ ಮುಂದೂಡಲಾಗಿದ್ದು, ಮುಂದಿನ ಅದಾಲತ್ ಮೇ ೫ ರಂದು ಬೆಳಗ್ಗೆ೧೧ ರಿಂದ ಮಧ್ಯಾಹ್ನ ೧.೩೦ ರವರೆಗೆ ಹಾಗೂ ಮಧ್ಯಾಹ್ನ ೨:೩೦ ರಿಂದ ಮಧ್ಯಾಹ್ನ ೫:೦೦ ರವರೆಗೆ ಬೆಂಗಳೂರಿನ ಬಹುಮಹಡಿಗಳ ಕಟ್ಟಡ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗೇಟ್-ನಂ-೨ ಎರಡನೇ ಮಹಡಿಯಲ್ಲಿ ನಡೆಯಲಿದೆ.
ಜಿಲ್ಲೆಯ ಸಾರ್ವಜನಿಕರು ಈ ಅದಾಲತ್ ನಲ್ಲಿ ಭಾಗವಹಿಸಬಹುದಾಗಿದೆ. ಆಕ್ಷೇಪಣೆ ಮತ್ತು ಅಹವಾಲುಗಳನ್ನು ಸಲ್ಲಿಸಿದವರು ಅದಾಲತ್ ನಲ್ಲಿ ಭಾಗವಹಿಸಲು ಇಚ್ಛಿಸಿದಲ್ಲಿ, ತಮ್ಮ ಆಧಾರ್ ಅಥವಾ ಗುರುತಿನ ಚೀಟಿ ಅಥವಾ ಸರ್ಕಾರದಿಂದ ನೀಡಿರುವ ಭಾವಚಿತ್ರವುಳ್ಳ ಯಾವುದೇ ಗುರುತಿನ ಚೀಟಿಯ ಪ್ರತಿಯನ್ನು ತಮ್ಮೊಂದಿಗೆ ಕಡ್ಡಾಯವಾಗಿ ತರಬಹುದಾಗಿದೆ ಎಂದು ಪಂಚಾಯತ್ ರಾಜ್ ಇಲಾಖೆ ಪ್ರಕಟಣೆ ಹೊರಡಿಸಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
