ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೋರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜು ಮರಗೊರ ಮತ್ತು ನಾಲತವಾಡ ಉನ್ನತೀಕರಿಸಿದ ವಸತಿ ಶಾಲೆಗಳಲ್ಲಿ ೨೦೨೬-೨೭ನೇ ಸಾಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ ಪಿಸಿಎಂಬಿ, ಪಿಸಿಎಂಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಆನ್‌ಲೈನ್http://kreis.karnataka.gov.in� ಮೂಲಕ ಏ. ೩೦, ೨೦೨೬ ರೊಳಗಾಗಿ ಅರ್ಜಿ ಸಲ್ಲಿಸಬಹುದು. ಶೇ.೫೦ರಷ್ಟು ಸೀಟುಗಳನ್ನು ವಸತಿ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಉಳಿದ ಶೇ.೫೦ರಷ್ಟು ಇತರ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ವಸತಿ ಶಾಲೆ , ಕಾಲೇಜುಗಳಿಂದ ಹಾಗೂ ದೂರವಾಣಿ ಸಂಖ್ಯೆ ೯೦೦೮೭೦೭೨೦೬, ೯೮೮೦೮೯೯೫೧೦ ಹಾಗೂ ೯೭೪೧೬೪೭೮೨೩ ಮೂಲಕ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ
