ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ತಾಲ್ಲೂಕಿನ ಹುಬನೂರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ.
ಲಕ್ಷ್ಮೀ ಭಜಂತ್ರಿ ಶೇ. 95.68, ವಿಶಾಲ ಮಾಳಿ ಶೇ.92.64, ಸಾಗರ ಮಾಳಿ ಶೇ.91.36 ಪಡೆದು ಸಾಧನೆ ಮಾಡಿದ್ದಾರೆ.
ಸಾಗರ ಮಾಳಿ, ಪ್ರವೀಣ ರಾಠೋಡ ಹಿಂದಿಯಲ್ಲಿ ನೂರಕ್ಕೆ ನೂರು ಅಂಕ ಪಡೆದುಕೊಂಡಿದ್ದಾರೆ.
ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಎಸ್ಡಿಎಂಸಿ ಅಧ್ಯಕ್ಷರು ಉಪಾಧ್ಯಕ್ಷರು , ಸದಸ್ಯರು, ಊರಿನ ಗಣ್ಯರು, ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು, ಶಾಲಾ ಮುಖ್ಯೋಪಾಧ್ಯಾಯ ಸುರೇಶ ಕುಪ್ಪಿ ಅಭಿನಂದನೆ ಸಲ್ಲಿಸಿದ್ದಾರೆ.

