ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 218ರ ಗಾಣದೇವಿ ಸರ್ಕಲ್ ಹತ್ತಿರ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ಯುವಕನನ್ನು ವಿಜಯಪುರದ ನಿವಾಸಿ ಆಕಾಶ ಭೀಮಪ್ಪ ಬಬಲೇಶ್ವರ (ಬಂಡಿವಡ್ಡರ) (26) ಎಂದು ಗುರುತಿಸಲಾಗಿದೆ.
ವಿಜಯಪುರದಿಂದ ಬೀಳಗಿ ಕಡೆಗೆ ತೆರಳುತ್ತಿದ್ದ ಬೀಳಗಿ ಘಟಕದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಡಿಕ್ಕಿ ತೀವ್ರವಾಗಿದ್ದರಿಂದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
