ಮಾಹಿತಿ ಹಕ್ಕು ಕಾಯ್ಕೆಯ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಮತ್ತು ರಾಜಶೇಖರ ಎಸ್. ಅವರು ಮೇ 2 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಜಿಲ್ಲೆಯಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಅಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ನಡೆಯಲಿರುವ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸುವರು.
ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ಕೆಯ ಕುರಿತು ಜಾಗೃತಿ ಕಾರ್ಯಕ್ರಮ ನಡಯಲಿದೆ.
ಹಾಗಾಗಿ ಜಿಲ್ಲೆಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರಕ್ಕೆ ಕಡ್ಡಾಯವಾಗಿ ಹಾಜರಾಗಬೇಕು.ಬದಲಿಗೆ ಯಾವುದೇ ಪ್ರತಿನಿಧಿ ಕಳುಹಿಸದೇ ತಾವುಗಳು ಖುದ್ದಾಗಿ ಹಾಜರಿರಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಔದ್ರಾಮ ತಿಳಿಸಿದ್ದಾರೆ.
