ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಂದ ದಾಳಿ | ಮೂವರ ಬಂಧನ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅನ್ನ ಭಾಗ್ಯ ಯೋಜನೆಯಡಿ ಅಕ್ರಮ ಅಕ್ಕಿ ಸಾಗಣೆ ಪತ್ತೆ ಮಾಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮೂವರನ್ನು ಬಂಧಿಸಿ ಅವರಿಂದ ಪಡಿತರ ಅಕ್ಕಿ ವಶಪಡಿಸಿಕೊಂಡ ಘಟನೆ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದ ಹೋಟೆಲ್ ಸಾಹಿಲ ಎದುರುಗಡೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಹಾಂತೇಶ ಹನಮಪ್ಪ ಬಾಲಕನವರ, ಹನುಮೇಶ್ ದೊಡ್ಡಬಸಪ್ಪ ಗೋನಾಳ ಎಂಬುವರ ವಿರುದ್ಧ ವಿಜಯಪುರ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಅನ್ನಭಾಗ್ಯ ಯೋಜನೆಯಡಿ ಹಂಚಲ್ಪಡುವ ಅಕ್ಕಿ ಅಕ್ರಮ ಸಾಗಣೆಯಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಅಕ್ರಮವಾಗಿ ಸಾಗಣೆಯಾಗುತ್ತಿದ್ದ ಅಕ್ಕಿ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅರೋಪಿಗಳಿಂದ 32850 ಕೆಜಿ ಅಕ್ಕಿ ಹಾಗೂ ಲಾರಿ ವಶಪಡಿಸಿಕೊಂಡಿದ್ದಾರೆ.
ದಾಳಿಯಲ್ಲಿ ಆಹಾರ ನಿರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ,
ಎ ಎಸ್ ಐ ಆರ್. ಎನ್. ಪರಗುಳಿ, ಸಿಬ್ಬಂದಿ ಬಸವರಾಜ ಅಂಬಿಗೇರ ಪಾಲ್ಗೊಂಡಿದ್ದರು ಎಂದು ಆಹಾರ ಇಲಾಖೆಯ
ಉಪ ನಿರ್ದೇಶಕರಾದ
ವಿನಯ ಕುಮಾರ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
