ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗದಗ ತೋಂಟದಾರ್ಯ ವಿದ್ಯಾಪೀಠದ ಮಹಾ ಪ್ರಧಾನ ಕಾರ್ಯದರ್ಶಿಗಳಾದ ಶಿವಾನಂದ ಎಸ್. ಪಟ್ಟಣಶೆಟ್ಟಿ ಅವರು ೨೦೨೬ ನೇ ಸಾಲಿನ “ಕಾಯಕಯೋಗಿ ಪ್ರಶಸ್ತಿ”ಗೆ ಭಾಜನರಾಗಿದ್ದಾರೆ.
ದೊಡ್ಡಬಳ್ಳಾಪುರ ದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಕೊಡಮಾಡುವ “ಕಾಯಕಯೋಗಿ ಪ್ರಶಸ್ತಿ” ಯನ್ನು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಾನಂದ ಎಸ್. ಪಟ್ಟಣಶೆಟ್ಟಿ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭಿನಂದನೆ
“ಕಾಯಕಯೋಗಿ ಪ್ರಶಸ್ತಿ”ಗೆ ಭಾಜನರಾದ ಶಿವಾನಂದ ಎಸ್. ಪಟ್ಟಣಶೆಟ್ಟಿ ಅವರಿಗೆ ಸಿಂದಗಿಯ ಜಗದೀಶ ಕಲಬುರ್ಗಿ ಹಾಗೂ ಕಲಬುರ್ಗಿ ಪರಿವಾರ ಅಭಿನಂದಿಸಿ ಶುಭ ಕೋರಿದ್ದಾರೆ.

