ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಎಸ್ಸೆಸ್ಸೆಲ್ಸಿ ಇಲ್ಲವೇ ತತ್ಸಮಾನ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳಿಂದ ೨೦೨೬-೨೭ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಮೆರಿಟ್ ಹಾಗೂ ರೋಸ್ಟರ್ ಆಧಾರಿತವಾಗಿ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಮೇ ೨ ರೊಳಗಾಗಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ಪ್ರಾಚಾರ್ಯರಿಗೆ ನೇರವಾಗಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಮೇ ೪ ರಂದು ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು.
ಆಫ್ ಲೈನ್ ಕೌನ್ಸಲಿಂಗ್ ಮೂಲಕ ಸೀಟು ಹಂಚಿಕೆ ಮಾಡಿ, ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳು ಮತ್ತು ಪ್ರವೇಶ ಶುಲ್ಕದೊಂದಿಗೆ ಪ್ರವೇಶವನ್ನು ಮೇ ೫ರೊಳಗಾಗಿ ಅಂತಿಮವಾಗಿ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ bidutt dtetech.karnataka.gov.inಹಾಗೂ ಜಣeಞ.ಞಚಿಡಿಟಿಚಿಣಚಿಞಚಿ.gov.iಟಿ ವೆಬ್ ಸೈಟ್ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
