ಉದಯರಶ್ಮಿ ದಿನಪತ್ರಿಕೆ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಈ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 4ರಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು, ಹಿನ್ನಲೆಯಲ್ಲಿ ಮತ ಎಣಿಕೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ಜರುಗಿತು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಂಡ ತರಬೇತಿಯನ್ನು ಉದ್ದೇಶಿಸಿ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಮತ ಏಣಿಕೆ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ಕಾರ್ಯ ನಡೆಸಲಾಗುತ್ತಿದೆ. ಈಗಾಗಲೇ ಮತ ಎಣಿಕೆ ಕೇಂದ್ರ ಸಂಪೂರ್ಣ ಸಜ್ಜಾಗಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ವಯ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ತಿಳಿಸಿದರು. ಎಣಿಕೆ
ಮತ ಎಣಿಕೆಗೆ ಒಟ್ಟು 14 ಟೇಬಲ್‌ಗಳನ್ನು ಇರಿಸಲಾಗಿದ್ದು, ಪ್ರತಿ ಟೇಬಲ್‌ಗೆ ತಲಾ ಒಬ್ಬರಂತೆ ಮತ ಎಣಿಕಾ ಮೇಲ್ವಿಚಾರಕ, ಸಹಾಯಕ ಮತ್ತು ಮೈಕ್ರೋ ವೀಕ್ಷಕರು ಸೇರಿದಂತೆ ಒಟ್ಟು 62 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಅಂಚೆ ಮತಪತ್ರ ಎಣಿಕೆಗೆ ಪ್ರತ್ಯೇಕ ಕೊಠಡಿ ಇದ್ದು, 2 ಟೇಬಲ್ ಇರಿಸಲಾಗಿದೆ. ಸ್ಯಾನಿಂಗ್ ಮಾಡಲು ಟೇಬಲ್ ಸಹ ಇರಿಸಲಾಗಿದೆ ಎಂದು ತಿಳಿಸಿದರು.
ಮಾಸ್ಟರ ಟ್ರೈನರ್ ಶಶಿಶೇಖರ ರೆಡ್ಡಿ ಅವರು ಪ್ರಾತ್ಯಕ್ಷಿಕೆಯ ಮೂಲಕ ಮತ ಏಣಿಕೆ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಟ್ಟರು. ಮತ ಎಣಿಕೆ ಪ್ರಕ್ರಿಯೆಯ ಎಲ್ಲ ಹಂತಗಳ ಕುರಿತು ವಿವರವಾದ ಮಾಹಿತಿ ನೀಡಿದರು. ವಿವಿಎಂ ಯಂತ್ರಗಳ ಬಳಕೆ, ವಿವಿಪ್ಯಾಟ್ ಸ್ಲಿಪ್‌ಗಳ ಪರಿಶೀಲನೆ, ಮತ ಎಣಿಕೆ ವೇಳೆ ಅನುಸರಿಸಬೇಕಾದ ನಿಯಮಗಳು ಹಾಗೂ ಎಚ್ಚರಿಕೆ ಕ್ರಮಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು.
ತರಬೇತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಶೀಲ್ದಾರರಾದ ವಾಸುದೇವ ಸ್ವಾಮಿ, ಡಾ. ಪ್ರದೀಪಕುಮಾರ ಸೇರಿದಂತೆ ಮತ ಎಣಿಕೆ ಮೇಲ್ವಿಚಾರಕರು, ಸಹಾಯಕರು ಹಾಗೂ ಮೈಕ್ರೋ ಆಬ್ಸರವರ್ ಪಾಲ್ಗೊಂಡಿದ್ದರು.

