ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಮೇ 4 ರಿಂದ ಮೇ 9ರ ವರೆಗೆ ಸೋಮವಾರದಿಂದ ಶನಿವಾರದ ವರೆಗೆ ಹಿರಿಯ ನಾಗರಿಕರಲ್ಲಿ ಕಂಡುಬರುವ ವಯೋಸಹಜವಾದ ನೆನಪಿನ ಶಕ್ತಿ ಸಮಸ್ಯೆ ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ನಡೆಯಲಿದೆ.
ಈ ಶಿಬಿರದಲ್ಲಿ ನೆನೆಪಿನ ಶಕ್ತಿ ಕ್ಷೀಣಿಸುವಿಕೆ, ಆಲೋಚನೆ ಮತ್ತು ನಿರ್ಧಾರದ ಸಮಸ್ಯೆ, ಸ್ಥಳ ಮತ್ತು ಸಮಯದ ಅರಿವು ಕಡಿಮೆಯಾಗುವುದು, ವರ್ತನೆ ಮತ್ತು ಮನಸ್ಥಿತಿಯಲ್ಲಿನ ಬದಲಾವಣೆ ಸಮಸ್ಯೆ ಎದುರಿಸುತ್ತಿರುವ 60 ರಿಂದ 75 ವರ್ಷದೊಳಗಿನ ಹಿರಿಯ ನಾಗರಿಕರು ಚಿಕಿತ್ಸೆ ಪಡೆಯಬಹುದಾಗಿದೆ.
ಇಂಥ ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಆಸ್ಪತ್ರೆಯ ಮೊಬೈಲ್ ಸಂಖ್ಯೆ- 9513397413 ಸಂಪರ್ಕಿಸಬಹುದಾಗಿದೆ.
