ಉದಯರಶ್ಮಿ ದಿನಪತ್ರಿಕೆ
ವಿಜಯ: ಐ.ಸಿ.ಎಸ್.ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಮೊದಲ ಮೂರು ರ‌್ಯಾಂಕ್ ಗಳಿಸುವ ಮೂಲಕ ಕೀರ್ತಿ ತಂದಿದ್ದಾರೆ.
ಗುರುವಾರ ಫಲಿತಾಂಶ ಪ್ರಕಟವಾಗಿದ್ದು, ಶಾಲೆಯು ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ.
ಶಾಲೆಯ ವಿದ್ಯಾರ್ಥಿಗಳಾದ ಗೌರಿ ಪಾಟೀಲ ಮತ್ತು ಸೂಫಿಯಾನ್ ಕಂದಗಲ ತಲಾ ಶೇ. 93.20 ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಆದೇ ರೀತಿ ಪ್ರೇಕ್ಷಾ ಪಾಟೀಲ ಶೇ. 90.60 ಅಂಕ ಗಳಿಸಿ ದ್ವಿತೀಯ ಮತ್ತು ಮಲ್ಲಿಕಾರ್ಜುನ ಬಿರಾದಾರ ಶೇ. 89.80 ಅಂಕ ಗಳಿಸಿ ಜಿಲ್ಲೆಗೆ ತೃತೀಯ ಸ್ಥಾನ ಗಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ವಿಧಾನ ಪರಿಷತ ಶಾಸಕ ಮತ್ತು ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ, ಶಾಲೆಯ ಕೋ- ಆರ್ಡಿನೇಟರ್ ಜಯಾ ಗಲಗಲಿ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.
