ವಿಜಯಪುರ: ವಿಜಯಪುರ ತಾಲೂಕಿನ ಹೆಸ್ಕಾಂನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ-ವಿಭಾಗ ವ್ಯಾಪ್ತಿಯ ರೈತರು ಹಾಗೂ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಗ್ರಾಹಕರ ಸಂವಾದ ಸಭೆಯನ್ನು ಅಕ್ಟೋಬರ್ ೨೧ ರಂದು ಬೆಳಿಗ್ಗೆ ೧೦ ಗಂಟೆಗೆ ಹೆಸ್ಕಾಂನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ-ವಿಭಾಗದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಉಪ ವಿಭಾಗದ ಕಚೇರಿಗೆ ಒಳಪಡುವ ಗ್ರಾಮಗಳ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
Related Posts
Add A Comment