ಮುದ್ದೇಬಿಹಾಳ: ಮತಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟಗಾರರ ಮೇಲೆ ಹಾಗೂ ಸನ್ನದು ಷರತ್ತುಗಳನ್ನು ಉಲ್ಲಂಘನೆ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಭೀಮ ಸೇನೆಯ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ ಗೆ ಮನವಿ ಪತ್ರ ಸಲ್ಲಿಸಿದರು.
ಮತಕ್ಷೇತ್ರದ ಪ್ರತಿಯೊಂದು ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ರಾಜಾರೋಷವಾಗಿ ಮಾಡುತ್ತಿದ್ದು, ಇದರ ಪರಿಣಾಮವಾಗಿ ಗ್ರಾಮೀಣ ಜನರ ಬದುಕು ಮೂರಾಬಟ್ಟಿಯಾಗಿದೆ. ಪ್ರತಿ ಗ್ರಾಮಗಳಲ್ಲಿ ಸುಮಾರು ನಾಲ್ಕರಿಂದ ಐದಾರು ಜನರು ಅಕ್ರಮ ಮದ್ಯ ಮಾರಾಟವನ್ನು ನಡೆಸುತ್ತಿದ್ದಾರೆ. ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿದರೂ ತಿಳಿಯದ ಹಾಗೆ ಇರುತ್ತಾರೆ.ಇಲ್ಲಿನ ತಹಶೀಲ್ದಾರರ ಕಛೇರಿಯ ಆವರಣದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಸನ್ನದು ನವೀಕರಣ ಸಂದರ್ಭದಲ್ಲಿ ಅಬಕಾರಿ ಆಯುಕ್ತರ ಮಾರ್ಗಸೂಚಿಯನ್ನು ಪಾಲಿಸದೆ ಮತ್ತು ದೂರು ನೀಡಿದರೂ ಕ್ರಮ ಕೈಗೊಳ್ಳದ ಅಬಕಾರಿ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹವು ಸುಮಾರು ೭೨ ದಿನಗಳು ಪೂರೈಸಿದರೂ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಮುಂದಾಗದೆ ಇರುವುದು ತುಂಬಾ ನೋವಿನ ಸಂಗತಿ. ಜನರ ಹಿತ ಕಾಪಾಡಬೇಕು ಅನ್ನುವ ಉದ್ದೇಶದಿಂದ ನಡೆಸುತ್ತಿರುವ ಹೋರಾಟಕ್ಕೆ ಸಂಘಟನೆಯ ಸಂಪೂರ್ಣ ಬೆಂಬಲವಿದೆ. ಅವರ ನ್ಯಾಯ ಸಮ್ಮತವಾದ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.
Related Posts
Add A Comment