Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೇ.೮ ರಂದು ವಿಜಯಪುರದಲ್ಲಿ ಬೃಹತ್ ರೈತ ಜನಜಾಗೃತಿ ಸಮಾವೇಶ
(ರಾಜ್ಯ ) ಜಿಲ್ಲೆ

ಮೇ.೮ ರಂದು ವಿಜಯಪುರದಲ್ಲಿ ಬೃಹತ್ ರೈತ ಜನಜಾಗೃತಿ ಸಮಾವೇಶ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ರಾಜ್ಯ ರೈತ ಸಂಘ – ಹಸಿರು ಸೇನೆ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ಇದೇ ದಿ.೮ ರಂದು ದರಬಾರ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ರೈತ ಜನಜಾಗೃತಿ ಸಮಾವೇಶ ಸಂಘಟಿಸಲಾಗಿದ್ದು, ಆಲಮಟ್ಟಿಯ ಲಾಲ್ ಬಹೂದ್ದೂರ ಶಾಸ್ತ್ರಿ ಆಣೆಕಟ್ಟನ್ನು ೫೧೯.೬೦ ಮೀಟರ ದಿಂದ ೫೨೪.೨೫೬ ಮೀಟರ್ ಕ್ಕೆ ಎತ್ತರಿಸಿ ಅದಕ್ಕೆ ಬೇಕಾಗುವ ಸಂಪೂರ್ಣ ಭೂ ಪರಿಹಾರ, ಪುರ್ನವಸತಿ, ಕಲ್ಪಿಸಿ ೫ ಜಿಲ್ಲೆಗಳಿಗೆ ಸಮಗ್ರ ನೀರಾವರಿ ಮಾಡುವುದು ಹಾಗೂ ಮುಳವಾಡ ಸೇರಿದಂತೆ ವಿವಿಧ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ಸೇರಿದಂತೆ ಅನೇಕ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ – ಹಸಿರು ಸೇನೆ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ಈ ನಾಡಿನಲ್ಲಿ ರೈತರಿಗೆ ಎಲ್ಲಾ ಕ್ಷೇತ್ರದಲ್ಲಿ ಎಲ್ಲಾ ಪ್ರಕಾರದ ಅನ್ಯಾಯಗಳಾಗುತ್ತಾ ಬಂದಿವೆ, ಅದನ್ನು ತಡೆಯಬೇಕಾದರೆ ರೈತರೆಲ್ಲರೂ ಜಾತ್ಯಾತೀತವಾಗಿ, ಪಕ್ಷಾತೀತವಾಗಿ, ಧರ್ಮಾತೀತವಾಗಿ ಗುರ್ಲಾಪುರದಲ್ಲಿ ನಡೆದ ಹೋರಾಟದ ಮೂಲಕ ಒಗ್ಗಟ್ಟಿನ ಸಂದೇಶ ಸಾರಿರುವ ರೈತರೆಲ್ಲರೂ ಸಮಯ ಸಂದರ್ಭ ಬಂದಾಗಲೆಲ್ಲ ಒಂದಾಗಬೇಕು, ರೈತರು ಎದುರಿಸುತ್ತಿರುವ ಜ್ಷಲಂತ ಸಮಸ್ಯೆಗಳನ್ನು ಈ ಸಮಾವೇಶದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನಕ್ಕೆ ತಂದು ರೈತರ ಶಕ್ತಿ ಎನ್ನೆಂದು ತೋರಿಸಲು ರೈತರೆಲ್ಲರೂ ಒಂದಾಗಿ ಈ ತರಹದ ಸಮಾವೇಶದ ಮೂಲಕ ಒಗ್ಗಟನ್ನು ತೋರಿಸಬೇಕಾಗಿದೆ ಎಂದರು.
ಮುಗಳಖೋಡ – ಜಿಡಗಾದ ಶ್ರೀ ಶಿವಯೋಗಿ ಡಾ. ಮುರಘರಾಜೇಂದ್ರ ಮಹಾಸ್ವಾಮಿಗಳು ಪಾವನ ಸಾನಿಧ್ಯವನ್ನು ವಹಿಸಿಕೊಳ್ಳಲಿದ್ದು, ಸಾನಿಧ್ಯವನ್ನು ಶಿರಶ್ಯಾಡದ ಅಭಿನವ ಮುರಘೇಂದ್ರ ಶಿವಾಚಾರ್ಯರು ಸೇರಿದಂತೆ ವಿವಿಧ ಮಠಾಧಿಶರು ಸಾನಿಧ್ಯ ವಹಿಸಲಿದ್ದು, ಸಂಘಟನೆಯ ರಾಜ್ಯಾಧ್ಯಕ್ಷ ಚುನಪ್ಪಾ ಪೂಜೇರಿ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಅವರ ನೇತೃತ್ವದಲ್ಲಿ ನಾಡಿನ ಸಾವಿರಾರು ರೈತ ಮುಖಂಡರು ಹಾಗೂ ರೈತರೊಡಗೂಡಿ ಈ ಕಾರ್ಯಕ್ರಮ ಜರುಗಲಿದೆ. ಜಿಲ್ಲೆಯ ಎಲ್ಲ ಅಧಿಕಾರಿಗಳು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಸುಮಾರು ೧೦-೧೫ ಸಾವಿರ ರೈತರೆಲ್ಲರೂ ಸೇರಿಕೊಂಡು ೪ ನೇ ಬೃಹತ್ ರೈತ ಜನ ಜಾಗೃತಿ ಸಮಾವೇಶವನ್ನು ನಗರದ ದರಬಾರ ಗ್ರೌಂಡನಲ್ಲಿ ಆಯೋಜನೆ ಮಾಡಿದ್ದು, ಇಲ್ಲಿ ಹಲವಾರು ಕೃಷಿ ತಜ್ಞರು, ವಿಜ್ಞಾನಿಗಳು, ರೈತ ಮುಖಂಡರು ಕೃಷಿ ಕುರಿತು ಚಿಂತನೆ, ಅಭಿಪ್ರಾಯ ಮಂಡನೆ ಮಾಡುತ್ತಿದ್ದು, ಜೊತೆಗೆ ಕೃಷಿಯಲ್ಲಿ ಹಾಗೂ ವಿವಿಧ ಕ್ಷೇತ್ರದಲ್ಲಿ ವಿನೂತನವಾಗಿ ಸಾಧನೆ ಮಾಡಿದ ಸಾಧಕರಿಗೆ ವಿಶೇಷವಾಗಿ ಸನ್ಮಾನಿಸಲಾಗುವುದು ಎಂದರು.
ಸಂಘದ ರಾಜ್ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ, ರಾಜ್ಯ ಉಪಾಧ್ಯಕ್ಷ ಕಲ್ಲು ಸೊನ್ನದ, ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಸಮಾವೇಶದಲ್ಲಿ ಸರ್ಕಾರದ ಮುಂದೆ ಹಕ್ಕೊತ್ತಾಯ

ಆಲಮಟ್ಟಿಯ ನೀರಾವರಿ ಯೋಜನೆಗೆ ಮುಳಗಡೆಗೆ ಗುರುತಿಸಿರುವ ಜಮೀನಿಗಿಂತ ಹೆಚ್ಚು ಭೂಮಿಯನ್ನು ಕಳೆದುಕೊಂಡ ರೈತರಿಗೆ ಇಲ್ಲಿಯವರೆಗೆ ಪರಿಹಾರ ನೀಡಿಲ್ಲ, ಕೂಡಲೇ ಮಂಜೂರ ಮಾಡುವುದು, ಜಿಲ್ಲೆಯಲ್ಲಿ ಅತೀಹೆಚ್ಚು ಬೆಳೆಯುವ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಬೆಂಬಲ ಬೆಲೆಯೊಂದಿಗೆ ಖರೀಧಿ, ಮೌಲ್ಯವರ್ಧನೆ ಹಾಗೂ ಯೋಗ್ಯ ಮಾರುಕಟ್ಟೆ ಕಲ್ಪಿಸಬೇಕು, ಅದಕ್ಕೆ ಅವಶ್ಯಕ ಯೋಜನೆ ರೂಪಿಸುವುದು, ವಿದ್ಯುತ್ ಅಕ್ರಂ ಸಕ್ರಂ ಯೋಜನೆ ಮುಂದುವರೆಸಬೇಕು, ವಿದ್ಯುತ್ ಇಲಾಖೆಯನ್ನು ಖಾಸಗಿ ಮಾಡುತ್ತಿರುವುದನ್ನ ಕೈಬಿಡಬೇಕು, ರೈತರಿಗೆ ಉಚಿತವಾಗಿ (ಕಡಿಮೆ ಬೆಲೆ) ಟಿ.ಸಿ ದೊರಕಿಸುವುದು, ರೈತರಿಗೆ ಹಗಲು ೧೨ ಘಂಟೆ ತ್ರೀಫೆಸ್ ಹಾಗೂ ರಾತ್ರಿ ಸಿಂಗಲ್ ಫೇಸ್ ಉಚಿತ ವಿದ್ಯುತ್ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಸರ್ಕಾರದ ಮುಂದೆ ಇರಿಸಿ ಸಮಾವೇಶದಲ್ಲಿ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಸಗರ ತಿಳಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.