ಆಕ್ಷೇಪಣೆ ಸಲ್ಲಿಸುವ ಅವಧಿ ಮೇ ೮ ರವರೆಗೆ ವಿಸ್ತರಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನಗಳನ್ನು ಪ್ರಕರಣ ೫(೧) ರಂತೆ ನಿಗದಿಪಡಿಸಿ ದಿನಾಂಕ:೧೮-೦೪-೨೦೨೬ ರಂದು ಕರ್ನಾಟಕ ರಾಜ್ಯಪತ್ರದಲ್ಲಿ ಹೊರಡಿಸಲಾದ ಕರಡು ಪ್ರಕಟಣೆಗೆ ಸಾರ್ವಜನಿಕರು ಆಕ್ಷೇಪಣೆಯನ್ನು ಸಲ್ಲಿಸುವ ಅವಧಿಯನ್ನು ಮೇ ೮ರಂದು ಸಂಜೆ ೫:೩೦ ಗಂಟೆಯವರೆಗೆ ವಿಸ್ತರಿಸಲಾಗಿದೆ.
ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯ ಕುರಿತಂತೆ, ಸ್ವೀಕರಿಸಿದ ಆಕ್ಷೇಪಣೆ, ಅಹವಾಲುಗಳ ಅದಾಲತ್ ಮೇ ೧೩ರಂದು ಮಧ್ಯಾಹ್ನ ೨:೩೦ ರಿಂದ ಸಂಜೆ ೫ ರವರೆಗೆ ಬೆಂಗಳೂರಿನ ಬಹುಮಹಡಿಗಳ ಕಟ್ಟಡ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗೇಟ್-ನಂ-೨, ಎರಡನೇ ಮಹಡಿಯಲ್ಲಿ ನಡೆಯಲಿದೆ.
ಜಿಲ್ಲೆಯ ಸಾರ್ವಜನಿಕರು ಈ ಅದಾಲತ್ ನಲ್ಲಿ ಭಾಗವಹಿಸಬಹುದಾಗಿದೆ. ಆಕ್ಷೇಪಣೆ ಮತ್ತು ಅಹವಾಲುಗಳನ್ನು ಸಲ್ಲಿಸಿದವರು ಅದಾಲತ್ ನಲ್ಲಿ ಭಾಗವಹಿಸಲು ಇಚ್ಛಿಸಿದಲ್ಲಿ, ತಮ್ಮ ಆಧಾರ್, ಗುರುತಿನ ಚೀಟಿ ಅಥವಾ ಸರ್ಕಾರದಿಂದ ನೀಡಿರುವ ಭಾವಚಿತ್ರವುಳ್ಳ ಯಾವುದೇ ಗುರುತಿನ ಚೀಟಿಯ ಪ್ರತಿಯೊಂದಿಗೆ ಹಾಜರಾಗಬಹುದಾಗಿದೆ ಎಂದು ಪಂಚಾಯತ್ ರಾಜ್ ಇಲಾಖೆ ಪ್ರಕಟಣೆ ಹೊರಡಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

