ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮೇ.೧೩ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-೨ ಅನ್ನು ಜಿಲ್ಲೆಯ ೦೫ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ೨೦೦ ಮೀ.ವ್ಯಾಪ್ತಿಯಲ್ಲಿನ ಝರಾಕ್ಸ ಅಂಗಡಿಗಳು, ಕಂಪ್ಯೂಟರ್ ಸೆಂಟರ್, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಬೆಳಿಗ್ಗೆ ೮ ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ತೆರೆಯದಂತೆ ಆದೇಶಿಸಿದೆ. ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

