Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಮತ್ತು ಪಟ್ಟಣ ಪಂಚಾಯತಿ ನೂತನ ಕಟ್ಟಡ ಲೋಕಾರ್ಪಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕಳೆದ ಮೂರು ವರ್ಷಗಳಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ ಎಲ್ಲ ವರ್ಗದ ಜನರ ಉಜ್ವಲ ಭವಿತವ್ಯದ ಆಶಾದೀಪ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ ಬದುಕಿಗೆ ನೆರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ತಜ್ಞರಾಗಿದ್ದಾರೆ. ಎಲ್ಲ ವರ್ಗದವರ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಿದೆ. ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಎಲ್ಲ ಆಯಾಮಗಳಲ್ಲೂ ನಮ್ಮ ಸರ್ಕಾರ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಬೃಹತ್ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಾಭಿವೃದ್ಧಿಕೋಶ, ಇಂಜನೀಯರಿಂಗ್ ಘಟಕ ಬೆಂಗಳೂರು ಹಾಗೂ ಪೌರಾಡಳಿತ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೂವತ್ತು ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆರಿಸಿದ ನೂತನ ಕಟ್ಟಡ ಹಾಗೂ ದೇವರಹಿಪ್ಪರಗಿಯ ಪಟ್ಟಣ ಪಂಚಾಯತಿಯ ಕಾರ್ಯಾಲಯದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈ ಹಿಂದೆ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇತ್ತು. ಆದರೆ ನಾವು ಕೈಗೊಂಡ ನೀರಾವರಿ ಯೋಜನೆಗಳಿಂದಾಗಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಇದರಿಂದಾಗಿ ಬಿಸಿಲಿನ ಬೇಗೆ ನೀಗಿದೆ. ಜೊತೆಗೆ ಕೋಟಿ ವೃಕ್ಷ ಅಭಿಯಾನದ ಫಲವಾಗಿ ಹಸಿರು ನಳನಳಿಸುವಂತಾಗಿದ್ದನ್ನು ಕಾಣಬಹುದಾಗಿದೆ ಎಂದರು.
ಈ ಬಾರಿ ಬೇಸಿಗೆ ಸಂದರ್ಭದಲ್ಲಿ ಜನ-ಜಾನುವಾರುಗಳಿಗೆ
ಕುಡಿಯುವ ನೀರಿಗಾಗಿ ಯಾವುದೇ ಸಮಸ್ಯೆಯಾಗಬಾರದೆಂಬ ದೂರದೃಷ್ಟಿ ಹೊಂದಿ, ಜಲಾಶಯಗಳಲ್ಲಿ ನೀರು ಕಾಯ್ದಿಟ್ಟುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಬಾರಿ ಆಗಸ್ಟ್ ೧ ರವರೆಗೂ ಕಿಡಿಯು ನೀರಿಗಾಗಿ ನೀರು ಕಾಯ್ದಿಡಲು ಸೂಚಿಸಲಾಗಿದೆ ಎಂದರು.
ದೇವರಹಿಪ್ಪರಗಿ ಆಸ್ಪತ್ರೆಯನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಿದ್ದರಿಂದ ಈ ಭಾಗದ ಜನತೆಗೆ ಬಹಳಷ್ಟು ಅನುಕೂಲವಾಗಲಿದೆ ಎಂದರು.
ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಭಿವೃದ್ದಿ ವಿಷಯದಲ್ಲಿ ಮತಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಶರಣಪ್ಪ ಸುಣಗಾರ, ದೇವರಹಿಪ್ಪರಗಿ ಪಪಂ ಅಧ್ಯಕ್ಷೆ ಜಯಶ್ರೀ ದೇವಣಗಾಂವ, ತಾಲೂಕಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಸಾಹೇಬಗೌಡ ಬಿರಾದಾರ, ಪಪಂ ಉಪಾಧ್ಯಕ್ಷ ರಮೇಶ ಮಸಬಿನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಕುಮಾರ ಗುಣಾರಿ, ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್, ತಹಶೀಲ್ದಾರ ನಿಂಗಣ್ಣ ಬಿರಾದಾರ, ಪಪಂ ತಾಲೂಕ ಕಾರ್ಯನಿರ್ವಹಣಾಧಿ ಭಾರತಿ ಚೆಲುವಯ್ಯ ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.

“ವಿಜಯಪುರ ಜಿಲ್ಲೆಯ ೧೭೮ ಹಳ್ಳ ತುಂಬುವ ಮಹತ್ವಾಕಾಂಕ್ಷಿ ಯೋಜನೆಯನ್ನು ಈಗಾಗಲೇ ಕಾರ್ಯಗತಗೊಳಿಸಲಾಗಿದೆ. ಕ್ಯಾನಲ್ ಜಾಲ ಮೂಲಕ ಹಳ್ಳತುಂಬಿ ಬಾಂದಾರ ನಿರ್ಮಾಣ ಮಾಡಲಾಗುವುದು. ಇದರಿಂದಾಗಿ ಜಿಲ್ಲೆಯಲ್ಲಿ ಮತ್ತಷ್ಟು ಅಂತರ್ಜಲ ಮಟ್ಟ ಹೆಚ್ಚಾಗಲಿದೆ. ತನ್ಮೂಲಕ ಅಂತರ್ಜಲ ಮಟ್ಟ ಹೆಚ್ಚಳದಲ್ಲಿ ದೇಶದಲ್ಲಿಯೇ ವಿಜಯಪುರ ಜಿಲ್ಲೆ ಮಾದರಿಯಾಗಲಿದೆ.”

– ಎಂ.ಬಿ.ಪಾಟೀಲ
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು

ಪತ್ರಿಕಾ ಭವನ ನಿರ್ಮಾಣಕ್ಕೆ ನಿವೇಶನ ಮಂಜೂರಿಗೆ ಮನವಿ

ದೇವರ ಹಿಪ್ಪರಗಿ ಪಟ್ಟಣದಲ್ಲಿ ನೂತನ ಪತ್ರಿಕಾ ಭವನ ನಿರ್ಮಿಸಲು ನಿವೇಶನ ಹಾಗೂ ಅಗತ್ಯ ಅನುದಾನ ದೊರಕಿಸಿಕೊಡಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಚಿವ ಎಂ.ಬಿ.ಪಾಟೀಲರಿಗೆ ಮನವಿ ಸಲ್ಲಿಸಲಾಯಿತು.
ಪತ್ರಕರ್ತರ ಮನವಿಗೆ ತಕ್ಷಣ ಸ್ಪಂದಿಸಿದ ಸಚಿವರು ಸ್ಥಳದಲ್ಲಿ ಉಪಸ್ಥಿತರಿದ್ದ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಅಪ್ರೋಜ ಅಹ್ಮದ್ ಪಟೇಲ ಅವರನ್ನು ಕರೆದು ಪತ್ರಕರ್ತರ ಮನವಿಗೆ ಶೀಘ್ರ ನಿವೇಶನ ದೊರಕಿಸಿಕೊಡಲು ಕ್ರಮಕ್ಕೆ ಸೂಚಿಸಿದರು.
ಈ ವೇಳೆ ಕಾನಿಪ ತಾಲೂಕು ಅಧ್ಯಕ್ಷ ಸಂಗಮೇಶ ಉತ್ನಾಳ, ಪ್ರಧಾನ ಕಾರ್ಯದರ್ಶಿ ಶಿವಾನಂದ ಕುಂಬಾರ. ಉಪಾಧ್ಯಕ್ಷರಾದ ಶ್ರೀಧರ ನಾಡಗೌಡ, ಮಂಜುನಾಥ ಬ್ಯಾಕೋಡ, ಖಜಾಂಚಿ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಕಾರ್ಯದರ್ಶಿಗಳಾದ ಹುಸೇನ ಕೊಕಟನೂರ, ಈರನಗೌಡ ಪಾಟೀಲ, ಮಳೆಪ್ಪಗೌಡ ಬಿರಾದಾರ, ಅಶೋಕ ಗೊಲ್ಲರ, ಅಹ್ಮದ್ ಅಲಿ ಮುಲ್ಲಾ, ಸಾಯಿಬಣ್ಣ ಹಳ್ಳಿ ಸೇರಿದಂತೆ ಅನೇಕರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
  • ರೇಬೀಸ್ ಕಾಯಿಲೆಗೆ 16 ವರ್ಷದ ಬಾಲಕ ಬಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.