Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
(ರಾಜ್ಯ ) ಜಿಲ್ಲೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಾಹಿತಿ ಹಕ್ಕು ಕಾಯ್ದೆ ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ಜನಪರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿಯಾಗಿದ್ದು, ಇಂತಹ ಜನಪರವಾಗಿರುವ ಈ ಕಾಯ್ದೆಯನ್ನು ಪ್ರತಿಯೊಬ್ಬ ಅಧಿಕಾರಿಗಳು ಅಧ್ಯಯನ ಮಾಡಿಕೊಂಡು ಸರಾಗ ಆಡಳಿತಕ್ಕೆ ಕೈಜೋಡಿಸಬೇಕು ಎಂದು ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಕುರಿತು ಅರಿವು ಮೂಡಿಸುವ ವಿಶೇಷ ತರಬೇತಿ ಕಾರ್ಯಾಗಾರ ಮತ್ತು ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮಾಹಿತಿ ಹಕ್ಕಿನಡಿ ಅರ್ಜಿದಾರ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದರೆ, ೩೦ ದಿನಗಳೊಳಗಾಗಿ ಉತ್ತರ ಕೊಡಬೇಕು. ಅರ್ಜಿದಾರ ಕೋರಿದ ಮಾಹಿತಿ ನೀಡಲು ಯಾವುದೇ ಕಾರಣಕ್ಕೂ ಹಿಂಜರಿಯಬೇಡಿ. ಒಂದು ವೇಳೆ ನೀವು ಮಾಹಿತಿ ನೀಡಲು ಹಿಂಜರಿದರೆ ಅದು ಅಪಾರ್ಥಕ್ಕೆ ಕಾರಣವಾಗಲಿದೆ. ಹಾಗಾಗಿ ಪ್ರಥಮ ಮೇಲ್ಮನವಿಗೆ ಹೋಗುವ ಮುನ್ನವೇ ಪ್ರತಿಯೊಬ್ಬ ಅಧಿಕಾರಿಯೂ ಉತ್ತರ ನೀಡಬೇಕು. ದ್ವಿತೀಯ ಮೇಲ್ಮನವಿಗೆ ಬಂದಾಗ ಅದನ್ನು ನಾವು ನೋಡಿಕೊಳ್ಳುತ್ತೇವೆ ಎಂದರು.
ಸರ್ಕಾರದ ಕಾರ್ಯಕ್ರಮಗಳಲ್ಲಿ ಪಾರದರ್ಶಕತೆ ತರುವುದರ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಗಟ್ಟಿಗೊಳಿಸಬೇಕು ಎಂಬ ದೂರದೃಷ್ಟಿಯಿಂದ ಜಾರಿಗೆ ತಂದಿರುವ ಮಾಹಿತಿ ಹಕ್ಕು ಕಾಯ್ದೆ ಜನಪರವಾಗಿದೆ. ಆದರೆ ಈ ಕಾಯ್ದೆ ದುರುಪಯೋಗ ಸಲ್ಲದು ಎಂದು ಹರ್ತಿಕೋಟಿ ಹೇಳಿದರು.
ಸರ್ಕಾರದ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವುದು ಹಾಗೂ ಪ್ರಜಾಪ್ರಭುತ್ವ ಗಟ್ಟಿಗೊಳಿಸಬೇಕು ಎಂಬ ಆಶಯದೊಂದಿಗೆ ಈ ಕಾಯ್ದೆ ಅಸ್ತಿತ್ವಕ್ಕೆ ಬಂದಿದೆ ಎಂದರು.
ಆಯುಕ್ತರಾದ ರಾಜಶೇಖರ ಎಸ್. ಮಾತನಾಡಿ, ಅಧಿಕಾರಿಗಳು ಸಾರ್ವಜನಿಕರು ಮತ್ತು ಸರ್ಕಾರದ ಕೊಂಡಿ ಇದ್ದಂತೆ ಎಂಬುದು ಮಾಹಿತಿ ಹಕ್ಕು ಕಾಯ್ದೆಯ ಆಶಯವಾಗಿದೆ. ಪಾರದರ್ಶಕವೇ ಈ ಕಾಯ್ದೆಯ ಮೂಲ ಮಂತ್ರ. ಈ ಕಾಯ್ದೆ ಜಾರಿಗೆ ಮುನ್ನವೇ ಕೆಲವರಿಗಷ್ಟೇ ಮಾಹಿತಿ ಗೊತ್ತಾಗುತ್ತಿತ್ತು. ಆದರೆ ಈ ಕಾಯ್ದೆ ಬಂದ ಬಳಿಕ ಪ್ರತಿಯೊಬ್ಬರಿಗೂ ಮಾಹಿತಿ ಸಿಗುತ್ತಿದೆ ಎಂದರು.
ಇನ್ನೋರ್ವ ಆಯುಕ್ತ ಪ್ರಕಾಶ ನಾರಾಯಣ ಚನ್ನಾಳ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಸೇರಿದಂತೆ ಬೇರೆ ಬೇರೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದಲ್ಲಿ ೭೬ ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಾಕಿ

ರಾಜ್ಯದಲ್ಲಿ ೭೬ ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೇವಾರಿ ಬಾಕಿ ಇವೆ. ಬೆಳಗಾವಿ ವಿಭಾಗ ೩ ನೇ ಸ್ಥಾನದಲ್ಲಿದೆ. ಹೀಗೆಯೇ ಸಾಕಷ್ಟು ಅರ್ಜಿಗಳು ವಿಲೇವಾರಿಗೆ ಬಾಕಿಯಿವೆ. ಇದು ಆಗಬಾರದು ಎಂದ ಆಯುಕ್ತರು, ವಿಜಯಪುರ ಜಿಲ್ಲೆಯಲ್ಲೂ ೪೧ಎ ೪೧ ಬಿ ಅರ್ಜಿಗಳನ್ನು ಶೀಘ್ರದಲ್ಲೇ ವಿಲೇವಾರಿ ಮಾಡಬೇಕು. ಸೂಕ್ತ ಅಧ್ಯಯನ ನಡೆಸಿದರೆ, ಕಾನೂನಿನ ತೊಡಕಿಲ್ಲದೇ ಅರ್ಜಿ ವಿಲೇವಾರಿ ಮಾಡಬಹುದಾಗಿದೆ ಎಂದರು.

“ಈ ಕಾಯ್ದೆ ಸಾರ್ವಜನಿಕರಿಗೆ ಪಾರದರ್ಶಕವಾಗಿದೆ. ಅವರಿಗೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಉತ್ತರ ಒದಗಿಸಬೇಕು. ಸಾರ್ವಜನಿಕ ಮಾಹಿತಿ ಕೊಡಬೇಕು.”

– ಡಾ. ಆನಂದ .ಕೆ
ಜಿಲ್ಲಾಧಿಕಾರಿ, ವಿಜಯಪುರ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು

ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
  • ರೇಬೀಸ್ ಕಾಯಿಲೆಗೆ 16 ವರ್ಷದ ಬಾಲಕ ಬಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.