Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
(ರಾಜ್ಯ ) ಜಿಲ್ಲೆ

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗುಬ್ಬೇವಾಡ ಗ್ರಾಮದಲ್ಲಿ ನೂತನ ವಿದ್ಯುತ್ ವಿತರಣಾ ಕೇಂದ್ರಕ್ಕೆ ಚಾಲನೆ ನೀಡಿದ ಶಾಸಕ ಅಶೋಕ ಮನಗೂಳಿ ಆಶಯ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಮೂಲ ಸೌಕರ್ಯದಿಂದ ವಂಚಿತವಾದ ಗುಬ್ಬೇವಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸತತ ಎರಡು ವರ್ಷಗಳ ಪ್ರಯತ್ನದಿಂದ ನೂತನ ವಿದ್ಯುತ್ ಕೇಂದ್ರ ನಿರ್ಮಾಣ ಮಾಡಿದ್ದು ಸಂತಸ ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ತಾಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ಗುಬ್ಬೇವಾಡ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ೧*೧೦ ಎಂ.ವ್ಹಿ.ಎ, ೧೧೦/೧೧ ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಚಾಲನೆ ಹಾಗೂ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಭಾಗದ ರೈತರ ಹೋರಾಟದ ಫಲವಾಗಿ ಇಂದು ಈ ನೂತನ ವಿದ್ಯುತ್ ಕೇಂದ್ರ ತಲೆ ಎತ್ತಿ ನಿಂತಿದೆ. ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆಯನ್ನು ಹೊಂದಿದ್ದೇನೆ. ೫ ಗ್ಯಾರಂಟಿ ಯೋಜನೆಗಳನ್ನು ದಲ್ಲಾಳಿಗಳು ಇಲ್ಲದೇ ಜನರಿಗೆ ಸರಕಾರ ತಲುಪಿಸುತ್ತಿದೆ. ಸಮಸ್ಯೆಗೆ ಮೂಲ ಪರಿಹಾರಕ್ಕೆ ತಾಳ್ಮೆ ಮುಖ್ಯ. ಈ ವರ್ಷ ಕೊರಳ್ಳಿ ಗ್ರಾಮಕ್ಕೆ ಸರಕಾರಿ ಪಿಯು ಕಾಲೇಜು ನೀಡಿದ್ದಾರೆ. ಮುಂದಿನ ದಿನಮಾನಗಳಲ್ಲಿ ಗುಬ್ಬೇವಾಡ ಗ್ರಾಮಕ್ಕೂ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈಗಾಗಲೇ ಸಿಂದಗಿ-ಕಲಕೇರಿ ರಸ್ತೆಗೆ ಈಗಾಗಲೇ ರೂ.೬ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇನೆ. ಈ ಭಾಗದ ಜನರಿಗೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದರು.
ಈ ವೇಳೆ ಬಾಗಲಕೋಟೆಯ ಕವಿಪ್ರನಿನಿ ಅದೀಕ್ಷಕ ಎಂಜನಿಯರ್ ರಮೇಶ ಪವಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಅಡಿವೇಶ್ವರ ಶ್ರೀಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಎಪಿಎಂಸಿ ನಿರ್ದೇಶಕ ಸದ್ದಾಂ ಪಟೇಲ, ರೈತ ಸಂಘದ ತಾಲೂಕಾಧ್ಯಕ್ಷ ಧರ್ಮಣ್ಣ ಗಬಸಾವಳಗಿ, ದೇವರಾಜ ನರಗೋದಿ, ಮುತ್ತುಗೌಡ ಪಾಟೀಲ ಮಾತನಾಡಿದರು.
ಈ ವೇಳೆ ವಿಜಯಪುರದ ಕವಿಪ್ರನಿನಿ ಯೋಜನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಜಗದೀಶ ಜಾಧವ, ಕಾರ್ಯಾಚರಣೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಾಹೀದ ಜಹಾಗೀರರಾದ, ಹೆಸ್ಕಾಂ ಎಇಇ ಚಂದ್ರಕಾಂತ ನಾಯಕ, ರಮೇಶ ಪವಾರ, ಸಂತೋಷ ಸಾಲಿ, ಎಸ್.ವಾಯ್ ಕೊಂಡಗೂಳಿ, ಬಸವರಾಜ ಮಾರಲಭಾವಿ, ಹುಸೇನಿ ತಾಂಬೊಳ್ಳಿ, ರಮೇಶ ಸಾವಳಸಂಗ, ಪ್ರಕಾಶ ಗೋಲಗೇರಿ, ವಿದ್ಯುತ್ ವಿತರಣಾ ಕೇಂದ್ರಕ್ಕೆ ಭೂದಾನ ಮಾಡಿದ ಬೋರಮ್ಮ ತಳವಾರ, ರಮೇಶ ಗುಬ್ಬೇವಾಡ, ನಿಂಗಪ್ಪ ಭಾವಿಕಟ್ಟಿ, ರಮೇಶ ಇಜೇರಿ, ಸಿದ್ದು ಅಂಗಡಿ ಸೇರಿದಂತೆ ಗುಬ್ಬೇವಾಡ ಗ್ರಾಮದ ಹಿರಿಯರು, ಪಕ್ಷದ ಮುಖಂಡರು ಹಾಗೂ ಹೆಸ್ಕಾಂ ಹಾಗೂ ಕರ್ನಾಟಕ ಪ್ರಸರಣ ನಿಗಮದ ಅಧಿಕಾರಿಗಳು ಮತ್ತು ಇತರರು ಇದ್ದರು.

” ನಮ್ಮೂರಿಗೆ ಸರಕಾರಿ ಪಪೂ ಕಾಲೇಜು, ಪ್ರಾಥಮಿಕ ಆರೋಗ್ಯ ಕೇಂದ್ರ, ರಸ್ತೆ ಸುಧಾರಣೆ, ಸಾರ್ವಜನಿಕ ಶೌಚಾಲಯ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಶಾಸಕ ಅಶೋಕ ಮನಗೂಳಿ ಅವರು ಅತೀ ಶೀಘ್ರದಲ್ಲಿ ಮಂಜೂರು ಮಾಡಿಸಿ ಕೊಟ್ಟರೆ ನಮ್ಮ ಭಾಗದ ಜನರಿಗೆ ಅನುಕೂಲವಾಗುತ್ತದೆ.”

– ಬಾಪುಗೌಡ ಪಾಟೀಲ
ಗ್ರಾಮಸ್ಥರು, ಗುಬ್ಬೇವಾಡ

ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸಿಡಿದ ಪಟಾಕಿಗಳು

ವಿದ್ಯುತ್ ವಿತರಣಾ ಕೇಂದ್ರದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಶಾಸಕ ಅಶೋಕ್ ಮನಗೂಳಿ ಅವರಿಗೆ ಗುಬ್ಬೆವಾಡ ಗ್ರಾಮದ ಅವರ ಕಾರ್ಯಕರ್ತರು ವಿದ್ಯುತ್ ವಿತರಣಾ ಘಟಕದಲ್ಲಿಯೇ ಪಟಾಕಿ ಸಿಡಿಸಿದ್ದಾರೆ.
ವಿದ್ಯುತ್ ವಿತರಣಾ ಘಟಕದಲ್ಲಿ ಅಗ್ನಿ ಅವಘಡವಾಗುವ ಸಾಧ್ಯತೆಗಳಿರುತ್ತವೆ. ಇಂತಹ ವಸ್ತುಗಳನ್ನು ಘಟಕದಲ್ಲಿ ತರುವಂತಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಆದರೆ ಕೆಲ ಗ್ರಾಮಸ್ಥರು ಸುಮಾರು ೫ ನಿಮಿಷಗಳ ಕಾಲ ಅಲ್ಲಿ ಪಟಾಕಿ ಸಿಡಿಸಿದರೂ ಅಧಿಕಾರಿಗಳು ತಡೆಯಲು ಮುಂದಾಗಲಿಲ್ಲ.

“ನೂತನ ೧೧೦/೧೧ ಕೆವ್ಹಿ ಕೇಂದ್ರ ನಿರ್ಮಾಣವಾಗುವುದರಿಂದ ಪಂಪ್ ಸೆಟ್ ಗಳು ಸುಟ್ಟು ಹೋಗದ ಹಾಗೆ ಆಗುತ್ತವೆ. ಹಗಲಿನಲ್ಲಿಯೇ ರೈತರಿಗೆ ಇನ್ನು ಮುಂದೆ ವಿದ್ಯುತ್ ಸರಬರಾಜು ಮಾಡಲಾಗುವುದು.”

– ಚಂದ್ರಕಾಂತ ನಾಯಕ
ಹೆಸ್ಕಾಂ ಎಇಇ, ಸಿಂದಗಿ

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು

ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
  • ರೇಬೀಸ್ ಕಾಯಿಲೆಗೆ 16 ವರ್ಷದ ಬಾಲಕ ಬಲಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.