ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಪಟ್ಟಣದಲ್ಲಿ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ, ದೇವಸ್ಥಾನದ ಮುಂಭಾಗದಲ್ಲಿ ಬೃಹತ್ ಕೃಷಿ ಮೇಳವನ್ನು ಎಂ.ಎಸ್. ಬೆಳ್ಳುಬ್ಬಿ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಮಹಾಲಿಂಗಪುರದ ರೋಹಿಣಿ ಬಯೋಟೆಕ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಡಾ.ಮಲ್ಲಪ್ಪ ಕಟ್ಟಿ ಅವರು ಕಬ್ಬಿನಲ್ಲಿ ಪ್ರತಿ ಎಕರೆಗೆ 100 ಟನ್ ಇಳುವರಿ ಪಡೆಯುವುದು ಹೇಗೆ ಎಂಬ ವಿಷಯದ ಕುರಿತು ತಾಂತ್ರಿಕ ಕಾರ್ಯಗಾರ ಹಾಗೂ ವಿಚಾರ ಸಂಕಿರಣ ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನ, ಸುಧಾರಿತ ಬೀಜ, ಗೊಬ್ಬರ ನಿರ್ವಹಣೆ ಹಾಗೂ ಉತ್ಪಾದನೆ ಹೆಚ್ಚಿಸುವ ವಿಧಾನಗಳ ಬಗ್ಗೆ ಮಾಹಿತಿ ನೀಡಲಾಗುವುದು. ಆದ್ದರಿಂದ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಸಮಿತಿಯವರು ಮನವಿ ಮಾಡಿದ್ದಾರೆ.
