Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
(ರಾಜ್ಯ ) ಜಿಲ್ಲೆ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪಶ್ಚಿಮ ಬಂಗಾಳ, ಆಸ್ಸಾಂ, ಪಾಂಡೇಚೇರಿಯಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವಿನ ನಗೆ ಬೀರಿರುವ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು‌.
ವಿಜಯಪುರ ಗಾಂಧಿವೃತ್ತದ ಎದುರು ಜಮಾಯಿಸಿದ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ ಪರಸ್ಪರ ಸಿಹಿ ತಿನಿಸಿ ಬಿಜೆಪಿ ಪಕ್ಷದ ಪರವಾಗಿ ಜಯ ಘೋಷಗಳನ್ನು ಮೊಳಗಿಸಿ ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಪಶ್ಚಿಮ ಬಂಗಾಳ, ಪುದಚೇರಿ, ಆಸ್ಸಾಂನಲ್ಲಿ ಭರ್ಜರಿ ಗೆಲುವನ್ನು ಬಿಜೆಪಿ ದಾಖಲಿಸಿದೆ, ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಪಾರ ಒಲವು ಹೊಂದಿದ್ದಾರೆ ಎಂಬುದಕ್ಕೆ ಸಾಕ್ಷಿ, ಅನೇಕ ವರುಷಗಳಿಂದ ಅಧಿಕಾರದಲ್ಲಿದ್ದ ತೃಣಮೂಲ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅರಳಿದೆ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹಾಗೂ ಮಮತಾ‌ ಬ್ಯಾನರ್ಜಿ ಅವರ ಕಾರ್ಯವೈಖರಿಯಿಂದ ಬೇಸತ್ತಿದ್ದ ಬಂಗಾಳದ ಜನತೆ ನಿರೀಕ್ಷೆಯಂತೆ ಬಿಜೆಪಿಗೆ ಬೆಂಬಲಿಸಿದ್ದಾರೆ, ಈಗ ಅಲ್ಲಿ ಅಭಿವೃದ್ಧಿ ಪರ್ವ ಆರಂಭಾಗಲಿದೆ ಎಂದರು.
ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಮಮತಾ ಬ್ಯಾನರ್ಜಿ ಅಕ್ರಮ ಬಾಂಗ್ಲಾ ನಿವಾಸಿಗಳನ್ನು ಪೋಷಿಸಿದರು, ಆದರೆ ಅಲ್ಲಿನ ಮತದಾರರು ತಕ್ಕ ಪಾಠ ಕಲಿಸಿದ್ದಾರೆ, ದರ್ಪದಿಂದ‌ ಮೆರೆಯುತ್ತಿದ್ದ ‌ಮಮತಾ ಬ್ಯಾನರ್ಜಿ ಅವರಿಗೆ ಸೋಲಿನ ರುಚಿ ತೋರಿಸಿದ್ದಾರೆ, ಪ್ರಧಾನಿ ನರೇಂದ್ರ ಮೋದಿಜಿ ಅವರ ಆಡಳಿತ ಅವಧಿಯಲ್ಲಿ ಆಗುತ್ತಿರುವ ಅಭಿವೃದ್ಧಿ ಯೋಜನೆಗಳಿಂದಾಗಿಯೇ ಜನತೆ ಬಿಜೆಪಿ ಜೊತೆ ನಿಂತಿದ್ದಾರೆ, ಅಭಿವೃದ್ಧಿಗೆ ಮತ ನೀಡಿದ್ದಾರೆ, ಇನ್ನೂ ಕಾಂಗ್ರೆಸ್ ಪಕ್ಷ ಎಲ್ಲಿಯೂ ಅಸ್ವಿತ್ವವನ್ನೇ ಕಾಪಾಡಿಕೊಳ್ಳದೇ ಅಸ್ಥಿರತೆಯಿಂದ ನಲಗುವಂತಾಗಿದೆ, ದೇಶ ವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದರು.
ಬಿಜೆಪಿ ಮುಖಂಡ
ವಿಜುಗೌಡ ಪಾಟೀಲ ಮಾತನಾಡಿ, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ, ಪ್ರತಿಪಕ್ಷಗಳು ಬಿಜೆಪಿಯ ಬಗ್ಗೆ ಸಾಕಷ್ಟು ಅಪ ಪ್ರಚಾರ ಮಾಡಿದರೂ ಸಹ ಜನತೆ ಅದಕ್ಕೆ ಸೊಪ್ಪು ಹಾಕದೇ ಪ್ರಧಾನಿ ಮೋದಿಜಿ ಉತ್ತಮ ಆಡಳಿತ ಕಾರಣದಿಂದಾಗಿ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಿ ಜನಾದೇಶ ನೀಡಿದ್ದಾರೆ, ಈ ಗೆಲುವು ಕಾರ್ಯಕರ್ತರಲ್ಲಿ ಸಂತಸ ತರಿಸಿದೆ ಎಂದರು.
ಪಾಲಿಕೆ ಸದಸ್ಯೆ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸ್ವಪ್ನಾ ಕಣಮುಚನಾಳ ಮಾತನಾಡಿ,
ಮಹಿಳಾ ಮೀಸಲಾತಿ ವಿರೋಧಿಸಿ ಮಹಿಳಾ ರಾಜಕೀಯ ಪ್ರಾತಿನಿಧ್ಯದ ವಿರುದ್ದವಾಗಿ ನಡೆದುಕೊಂಡ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳಿಗೆ ಮಹಿಳೆಯರು ತಕ್ಕ ಶಾಸ್ತಿ ಮಾಡಿದ್ದಾರೆ, ಮತ್ತೊಮ್ಮೆ ಪ್ರಧಾನಿ ಮೋದಿಜಿ ಅವರ ಪರಿಶುದ್ಧ ಆಡಳಿತ ಮೆಚ್ಚಿ ಬಿಜೆಪಿಗೆ ಬೆಂಬಲಿಸಿದ್ದಾರೆ ಎಂದರು.
ಡಾ. ಸುರೇಶ ಬಿರಾದಾರ, ಮಳುಗೌಡ ಪಾಟೀಲ, ಈರಣ್ಣ ರಾವೂರ, ಉಮೇಶ್ ಕೊಳಕರ್ ಶಿಲ್ಪಾ ಕುದುರಗೊಂಡ, ಸಂದೀಪ ಪಾಟೀಲ, ಭೀಮಾಶಂಕರ ಹದನೂರ, ಕೃಷ್ಣಾ ಗುನ್ಹಾಳಕರ, ರಾಜು ಮಗಿಮಠ, ಭರತ ಕೋಳಿ, ವಿಜಯ ಜೋಶಿ, ಪಾಪುಸಿಂಗ ರಜಪೂತ, ರಾಜೇಶ ತಾವಸೆ, ಭೀಮಸಿಂಗ್ ರಾಥೋಡ, ಶರಣಬಸಪ್ಪ ಕುಂಬಾರ, ಸಂತೋಷ ಹಲವಾಯಿ, ಅಪ್ಪು ಕುಂಬಾರ, ರಾಜು ಬಿರಾದಾರ, ಜಗದೀಶ ಮುಚ್ಚಂಡಿ, ಸಂತೋಷ ಯಂಕಪ್ಪಗೂಳ, ಪ್ರಹ್ಲಾದ ಕಾಂಬಳೆ, ವಿವೇಕ ತಾವರಗೇರಿ, ಶಿವರಾಜ ಮಡಿವಾಳ, ಮಂಥನ ಗಾಯಕವಾಡ , ಭಾರತಿ ಭುಯ್ಯಾರ, ಶಾಂತಾ ಉತ್ಲಾಸಕರ, ಶಾಂತಾ ಯಳಮೇಲಿ, ಶ್ರೀದೇವಿ ಅವಧಿ, ಬಸಮ್ಮಾ ಗುಜರಿ, ಪ್ರಿಯಾಂಕಾ ಶೇರಖಾನೆ ಪಾಲ್ಗೊಂಡಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.