ಉದಯರಶ್ಮಿ ದಿನಪತ್ರಿಕೆ
ಇಂಡಿ: ನಗರದ ರೈಲು ನಿಲ್ದಾಣದಲ್ಲಿ ನಿನ್ನೆ ಮಧ್ಯಾನ್ಹ ೨ ಗಂಟೆಗೆ ಸಂಬವಿಸಿದ ವಿದ್ಯುತ್ ಅವಘಡದಿಂದ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ನಜೀರ ಕುಮಸಗಿ ಅವರಿಗೆ ಸೇರಿದ ಮೊಬೈಲ್ ಅಂಗಡಿ ಹಾಗೂ ಕಟ್ಟಿಮನಿ ಅವರಿಗೆ ಸೇರಿದ ಚಪ್ಪಲ್ ಅಂಗಡಿ ಬೆಂಕಿಗೆ ಅಹುತಿಯಾಗಿವೆ.
ನೊಬೈಲ್ ಅಂಗಡಿಯಲ್ಲಿ ಸುಮಾರು ಒಂದು ಲಕ್ಷ ರೂ ಮೌಲ್ಯದ ಫೋನುಗಳು ಹಾಗೂ ಇತರೆ ಸಾಮಾನುಗಳು ಸುಟ್ಟು ಹೋಗಿವೆ. ಎಂದು ತಿಳಿದು ಬಂದಿದೆ.
ಇದೇ ವೇಳೆ ಚಪ್ಪಲ್ ಅಂಗಡಿಯಲ್ಲಿ ಸುಮಾರು ಎರಡು ಲಕ್ಷದ ಮೌಲ್ಯದ ಚಪ್ಪಲಗಳು ಹಾಗೂ ಇತರೆ ವಸ್ತುಗಳು ಬೆಂಕಿಗೆ ಅಹುತಿಯಾಗಿವೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಇಂಡಿ ಗ್ರಾಮೀಣ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
