ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೫-೨೬ ನೇ ಸಾಲಿನಲ್ಲಿ ಹೊಸದಾಗಿ ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಪುನರ್ವಸತಿ ಕಾಯ್ದೆ ೨೦೧೩ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ರಚಿಸಲು, ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಂದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ.
ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಾಗಲು ಬಯಸುವವರು ಸಫಾಯಿ ಕರ್ಮಚಾರಿಗಳ ಪುನರ್ವಸತಿಗಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳಿಗೆ ಸೇರಿದ ಅಥವಾ ಜಿಲ್ಲಾ ಮಟ್ಟದಲ್ಲಿ ವಾಸಿಸುವ ಸಮುದಾಯವನ್ನು ಪ್ರತಿನಿಧಿಸುತ್ತಿರುವ ೦೪ ಜನ ಮೀರದಂತೆ ಸಾಮಾಜಿಕ ಕಾರ್ಯಕರ್ತರು, ಅವರಲ್ಲಿ ಇಬ್ಬರು ಮಹಿಳೆಯರು ಇರತಕ್ಕದ್ದು. ಒಟ್ಟು ೦೪ ಜನ ಅಧಿಕಾರೇತರ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗುವುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ತಿಳಿಸಿದ್ದಾರೆ.
ಈ ಸಮಿತಿಗೆ ಸದಸ್ಯರಾಗ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮೇ ೧೦ರ ಮಧ್ಯಾಹ್ನ ೧:೩೦ ಗಂಟೆಯ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ವಿಜಯಪುರ ಅವರ ಕಚೇರಿಯಿಂದ ಮೇ ೫ರೊಳಗಾಗಿ ಪಡೆದುಕೊಳ್ಳಬಹುದಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
