Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳಲ್ಲಿ ಕುಂಠಿತವಾಗುತ್ತಿರುವ ಕ್ರೀಡಾಸಕ್ತಿ :ಬಿರಾದಾರ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳಲ್ಲಿ ಕುಂಠಿತವಾಗುತ್ತಿರುವ ಕ್ರೀಡಾಸಕ್ತಿ :ಬಿರಾದಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ ವಿಜಯಪುರ ವಲಯದಲ್ಲಿ ೫೦ಕ್ಕೂ ಹೆಚ್ಚು ಪದವಿ ಕಾಲೇಜುಗಳಿದ್ದರೂ, ಕ್ರೀಡಾ ಸ್ಪರ್ಧೆಯಲ್ಲಿ ಕೇವಲ ೬ ತಂಡಗಳು ಮಾತ್ರ ಭಾಗವಹಿಸಿರುವುದು ವಿಷಾದನೀಯ ಸಂಗತಿ ಎಂದು ಕೃಷಿಕ ಸಮಾಜದ ತಾಲೂಕಾಧ್ಯಕ್ಷ, ಸಂಸ್ಥೆಯ ನಿರ್ದೇಶಕ ಶಿವಪ್ಪಗೌಡ ಬಿರಾದಾರ ಕಳವಳ ವ್ಯಕ್ತಪಡಿಸಿದರು.
ಸಿಂದಗಿ ನಗರದ ತಾ.ಶಿ.ಪ್ರಮಂಡಳಿಯ ಸಿ.ಎಂ. ಮನಗೂಳಿ ಪದವಿ ಮಹಾವಿದ್ಯಾಲಯ ಹಾಗೂ ರಾಣಿಚೆನ್ನಮ್ಮ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ವಿಜಯಪುರ ದ್ವಿತೀಯ ವಲಯದ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ವಿದ್ಯಾರ್ಥಿಗಳು ಕ್ರೀಡೆಗಳಿಗಿಂತ ಪಠ್ಯ ಚಟುವಟಿಕೆ ಮತ್ತು ತಂತ್ರಜ್ಞಾನಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದರ ಪರಿಣಾಮವಾಗಿ ದೈಹಿಕ ಚಟುವಟಿಕೆಗಳು ಕಡಿಮೆಯಾಗುತ್ತಿದ್ದು, ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆ ಕುಂಠಿತವಾಗುತ್ತಿದೆ. ಹಾಗೆಯೇ, ಪೋಷಕರು ಹಾಗೂ ಶಿಕ್ಷಕರು ಕೂಡ ವಿದ್ಯಾರ್ಥಿಗಳನ್ನು ಕ್ರೀಡೆಗಳತ್ತ ಪ್ರೋತ್ಸಾಹಿಸುವ ಜವಾಬ್ದಾರಿ ಹೊಂದಿದ್ದಾರೆ. ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗದೆ, ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆಗಳೂ ಮಹತ್ವದ್ದೆಂಬ ಅರಿವು ಮೂಡಿಸುವ ಅಗತ್ಯವಿದೆ ಎಂದರು.
ಈ ವೇಳೆ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಣಮಂತ ಸುಣಗಾರ ಮಾತನಾಡಿ, ಕ್ರೀಡೆಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತ್ಯಂತ ಅಗತ್ಯ. ಕ್ರೀಡೆಯಿಂದ ನಾಯಕತ್ವ ಗುಣ ಮತ್ತು ಮೌಲ್ಯಗಳು ಬೆಳೆಯುತ್ತವೆ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಪತ್ರಕರ್ತ ಶಾಂತು ಹಿರೇಮಠ, ಆಲಮೇಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾದಿಕ ಸುಂಬಡ, ಎಚ್.ಎಂ.ಉತ್ನಾಳ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಎಸ್.ಎಂ.ಬಿರಾದಾರ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ರವಿ ಗೋಲಾ, ಉಪನ್ಯಾಸಕರಾದ ರಮೇಶ ಯಂಕಂಚಿಕರ, ಎಸ್.ಎ.ಜಾಗೀರದಾರ್, ಎಂ.ಎಂ.ಕೆಂಭಾವಿ, ಕೆ.ಎಚ್.ಸೋಮಾಪೂರ ಹಾಗೂ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇನ್ನಿತರರು ಇದ್ದರು.
ಕಾರ್ಯಕ್ರಮದ ಕ್ರೀಡಾಕೂಟದ ಸಂಘಟನಾ ಕಾರ್ಯಾದರ್ಶಿ ಡಾ.ಅಂಬರೀಶ ಬಿರಾದಾರ ಸ್ವಾಗತಿಸಿದರು. ರಾಹುಲ ಕಾಂಬಳೆ ನಿರೂಪಿಸಿದರು. ಸತೀಶ ಬಿರಾದಾರ ವಂದಿಸಿದರು.

ಪ್ರಶಸ್ತಿ ವಿತರಣಾ ಸಮಾರಂಭ

ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ೩ ತಂಡಗಳಿಗೆ ಸಂಸ್ಥೆಯ ನಿರ್ದೇಶಕ ಭೀಮಾಶಂಕರ ನೆಲ್ಲಗಿ, ಪ್ರಥಮ ದರ್ಜೆ ಗುತ್ತಿಗೆದಾರ ಮುತ್ತು ಮುಂಡೇವಾಡಗಿ ಕ್ರೀಡಾಪಟುಗಳಿಗೆ ಟ್ರೋಫಿ ಮತ್ತು ಬಹುಮಾನವನ್ನು ವಿತರಿಸಿದರು.
ಪ್ರಥಮ ಸ್ಥಾನವನ್ನು ತಾಳಿಕೋಟಿಯ ಎಚ್.ಎಸ್.ಪಾಟೀಲ ದೈಹಿಕ ಶಿಕ್ಷಣ ಮಹಾವಿದ್ಯಾಲಯ, ದ್ವಿತೀಯ ಸ್ಥಾನವನ್ನು ಸಿಂದಗಿಯ ಸಿ.ಎಂ.ಮನಗೂಳಿ ಪದವಿ ಮಹಾವಿದ್ಯಾಲಯ, ತೃತೀಯ ಸ್ಥಾನ ಜೆ.ಎಚ್.ಪಟೇಲ್ ಶಿಕ್ಷಣ ಮಹಾವಿದ್ಯಾಲಯವು ಗಿಟ್ಟಿಸಿಕೊಂಡಿತು. ಸಂತೋಷ ಬಳಗೊಂಡ ಉತ್ತಮ ಹೊಡೆತಗಾರ, ಉಮಾಕಾಂತ ಚವ್ಹಾಣ ಉತ್ತಮ ತೂರುಗಾರ, ಅಮೀತ ಕನವಳ್ಳಿ ಸರ್ವಾಂಗೀಣ ಆಟಗಾರ, ಸತೀಶ ಹೂನಳ್ಳಿ ಉತ್ತಮ ಲಿಬ್ರೋ ಪ್ರದರ್ಶಿಸಿ ಪಾರಿತೋಷಕ ಪಡೆದುಕೊಂಡರು. ವಿದ್ಯಾರ್ಥಿಗಳ ಉತ್ಸಾಹ ಹಾಗೂ ಕ್ರೀಡಾಸ್ಪೂರ್ತಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿತು.
ಈ ವೇಳೆ ಕಾಲೇಜಿನ ಪ್ರಾಚಾರ್ಯ ಎಸ್.ಎಂ.ಬಿರಾದಾರ, ಎ.ಆರ್.ಹೆಗ್ಗನದೊಡ್ಡಿ, ಉಪನ್ಯಾಸಕರಾದ ರಾಹುಲ ಕಾಂಬಳೆ, ಎಸ್.ಕೆ.ಹೂಗಾರ, ಎಸ್.ಎ.ಜಾಗೀರದಾರ್, ಕೆ.ಎಚ್.ಸೋಮಾಪೂರ, ಗವಿಸಿದ್ದಪ್ಪ ಆನೆಗುಂದಿ ಬಿ.ಡಿ.ಮಾಸ್ತಿ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ
    In ವಿಶೇಷ ಲೇಖನ
  • ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಸುಡುವ ಸೂರ್ಯನಿಗೊಂದು ಪತ್ರ
    In ವಿಶೇಷ ಲೇಖನ
  • ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಮೇ.೨೪ ರಂದು ಪಂಚಮಸಾಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಮಕ್ಕಳೇ ಪ್ರಭುದ್ದ ಭಾರತದ ಆಸ್ತಿ :ಪಿಎಸೈ ಮಹೇಶ ಸಂಕ
    In (ರಾಜ್ಯ ) ಜಿಲ್ಲೆ
  • ಪ.ಬಂಗಾಳದಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರಲ್ಲಿ ಹೆಚ್ಚಿದ ಆತ್ಮವಿಶ್ವಾಸ
    In (ರಾಜ್ಯ ) ಜಿಲ್ಲೆ
  • ಭಕ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಶಕ್ತಿ ಮಹಾಗುರುಗಳಿಗಿದೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಲ್ಲಿ ಕುಂಠಿತವಾಗುತ್ತಿರುವ ಕ್ರೀಡಾಸಕ್ತಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸವಾಲುಗಳನ್ನು ಎದುರಿಸಲು ಸೇತುಬಂಧ ಸಹಕಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.