Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಸುಡುವ ಸೂರ್ಯನಿಗೊಂದು ಪತ್ರ
ವಿಶೇಷ ಲೇಖನ

ಸುಡುವ ಸೂರ್ಯನಿಗೊಂದು ಪತ್ರ

By Updated:No Comments4 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ.
– ವೀಣಾ ಹೇಮಂತ್ ಗೌಡ ಪಾಟೀಲ್
ಮುಂಡರಗಿ
ಗದಗ ಜಿಲ್ಲೆ

ಉದಯರಶ್ಮಿ ದಿನಪತ್ರಿಕೆ

ಅಪ್ಪ ಜಗತ್ಪಾಲಕ ಸೂರ್ಯದೇವನೇ,
ನಿನಗೆ ಹೀಗೊಂದು ಪತ್ರ ಬರೆಯುವ ಪ್ರಮೇಯ ಬದುಕಿನಲ್ಲಿ ಬರುತ್ತದೆ ಎಂದು ಖಂಡಿತವಾಗಿಯೂ ಅಂದುಕೊಂಡಿರಲಿಲ್ಲ ಆದರೇನು ಮಾಡುವುದು?
ಇದೀಗ ನಿನಗೆ ಪತ್ರ ಬರೆಯಲೇಬೇಕಾದ, ಬರೆದು ಕ್ಷಮೆ ಕೇಳಿಕೊಳ್ಳಲೇಬೇಕಾದ ಕಾಲ ಕೂಡಿ ಬಂದಿದೆ.
ನೀನು ನಮ್ಮನ್ನು ಕ್ಷಮಿಸುವೆ ಎಂಬ ಭರವಸೆ ನನಗಿಲ್ಲ. ಆದರೆ ನಮ್ಮ ಸ್ವಯಂಕೃತ ಅಪರಾಧದ ತಪ್ಪೊಪ್ಪಿಗೆಯನ್ನು ನಿನ್ನ ಮುಂದೆ ಹೇಳಿಕೊಂಡು ನನ್ನ ಮನದ ಭಾರವನ್ನು ಹಗುರವಾಗಿಸಿಕೊಳ್ಳುವ ಆಶಯ ನನ್ನದು.
ನಮ್ಮ ಬದುಕನ್ನು ಬೆಳಗುವ ನಮ್ಮೆಲ್ಲ ದೈನಂದಿನ ಕೃತ್ಯಗಳಿಗೆ ಸಾಕ್ಷಿಯಾಗುವ ನಮಗೆ ಆಹಾರ ತಯಾರಿಸಿಕೊಳ್ಳಲು ಬೇಕಾಗುವ ಸಸ್ಯಗಳಿಗೆ ಸಂಜೀವಿನಿಯಾಗಿರುವ, ನಿನ್ನ ಅಸ್ತಿತ್ವವಿಲ್ಲದೆ ನಾವ್ಯಾರು ಇಲ್ಲ ಎಂಬ ಅರಿವನ್ನು ಹೊಂದಿದ್ದರೂ ಕೂಡ, ತಿಳಿದು ಕೂಡ ಅಜ್ಞರಂತೆ ವರ್ತಿಸುತ್ತಿರುವ ನಿನ್ನ ಮಕ್ಕಳ ತಪ್ಪು ಕ್ಷಮಿಸಲಾರದ ಮಹಾಪರಾಧ.. ನಿಜ.
ಕೇವಲ ನಾಲ್ಕೈದು ದಶಕಗಳ ಹಿಂದೆ ಉದ್ಯಮಗಳು ತೆವಳುತ್ತಿರುವ ಕಾಲದಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅವಶ್ಯಕತೆ ಇತ್ತು.. ಇದೀಗ ಸರ್ಕಾರದ ಕಟ್ಟುನಿಟ್ಟಿನ ನಿಯಮಾವಳಿಗಳ ಚಾಪೆಯ ಕೆಳಗೆ ನುಸುಳುವ ಕಲೆ ಜನರಿಗೆ ಗೊತ್ತಾಗಿದೆ. ಮತ್ತೆ ಕೆಲವರು ರಂಗೋಲಿಯ ಕೆಳಗೆ ನುಸುಳುವ ಚಾಣಾಕ್ಷತೆಯನ್ನು ಕೂಡ ಹೊಂದಿದ್ದಾರೆ.. ಎಲ್ಲೋ ಒಬ್ಬಿಬ್ಬರು ಹೀಗೆ ಮಾಡಿದ್ದರೆ ನೀನು ಕೂಡ ಹೋಗಲಿ ಬಿಡು ಎಂದು ಕ್ಷಮಿಸಿ ಬಿಡುತ್ತಿದ್ದೆ ಅಲ್ವೇ?
ಆದರೆ ಉದ್ಯಮಗಳು ಉಗುಳುವ ಹೊಗೆಯನ್ನು ನಿನ್ನ ಅತಿ ನೇರಳೆ ಕಿರಣಗಳ ತಾಪವನ್ನು ತಡೆಯಲೆಂದು ಇರುವ ರಕ್ಷಾ ಕವಚ ಓಜೋನನ್ನು ಒಂದು ಇಡೀ ಆಸ್ಟ್ರೇಲಿಯಾ ಖಂಡದಷ್ಟು ಛಿದ್ರಗೊಳಿಸಿದ ಮೇಲೆ ನಿನಗೆ ಕೋಪ ಬರದಿದ್ದರೆ ಹೇಗೆ ?


ಉಣ್ಣುವ ತಟ್ಟೆಯನ್ನು ಛೇದ ಮಾಡುವಂತಹ ವಿಸ್ಮೃತಿ ನಮಗೇಕೆ ಬಂತು ಎಂದು ನಿನಗೆ ಕೋಪ ಬಂದಿದ್ದರೆ ಖಂಡಿತವಾಗಿಯೂ ಅದು ನಿನ್ನ ತಪ್ಪಲ್ಲ.
ಹಾಗೆಂದು ಎಲ್ಲ ತಪ್ಪನ್ನು ಉದ್ಯಮಗಳ ಮೇಲೆ, ಅವುಗಳು ಕಾರುವ ಕರಿ ಹೊಗೆಗಳ ಮೇಲೆ ಹಾಕಿ ನಾವು ಸಾಚಾ ಸಿದ್ದಪ್ಪಗಳು ಎಂದುಕೊಂಡರೆ ಅದು ನಮ್ಮ ಮೂರ್ಖತನವಾದೀತು. ನಿನ್ನ ಈ ಪ್ರಕೋಪಕ್ಕೆ ನಾವು ಮನುಷ್ಯರು ಕೂಡ ನಮ್ಮ ತಪ್ಪಿನ ಸಿಂಹಪಾಲನ್ನು ಸಲ್ಲಿಸಿದ್ದೇವೆ.
ನಮ್ಮದೇ ಸಂತಾನವನ್ನು ಹೆಚ್ಚಿಸಿಕೊಳ್ಳುವ ನಮ್ಮದೇ ಬದುಕನ್ನು ಮತ್ತಷ್ಟು ಮಗದಷ್ಟು ಚೆನ್ನಾಗಿ ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಕಾಡನ್ನು ಕಡಿದು ನಾಡಾಗಿಸಿದ್ದೇವೆ.. ಕಾಡಿನ ಪ್ರಾಣಿಗಳು ಅವು ಕೂಡ ನಿನ್ನ ಮಕ್ಕಳಲ್ಲವೇ ? ಅವುಗಳ ಮನೆಗೆ ಬೆಂಕಿ ಇಟ್ಟು ಅವರನ್ನು ನೆಲೆಗೇಡಿಯನ್ನಾಗಿಸಿ ನಾವು ಬೆಚ್ಚಗಿನ ಗೂಡಿನಲ್ಲಿ ಇರಲು ಸಾಧ್ಯವೇ? ಧಗೆಯ ಒಡಲೇ ನಮ್ಮ ಬದುಕು
ಆಗುತ್ತದೆ ಎಂಬ ಅರಿವಿಲ್ಲದೆ ಅಭಿವೃದ್ಧಿಯ ಹೆಸರಿನಲ್ಲಿ, ಮೂಲ ಸೌಕರ್ಯಗಳನ್ನು ಹೆಚ್ಚಿಸುವ ನೆವದಲ್ಲಿ ಕಾಡನ್ನು ನಾಶ ಮಾಡಿರುವುದು, ಗಿಡ ಮರಗಳಿಗೆ ಕೊಡಲಿಯ ಪ್ರಹಾರ ಮಾಡಿ ಅವುಗಳನ್ನು ಧರಾಶಾಹಿಯಾಗಿಸಿರುವುದು ನಮ್ಮದೇ ಸ್ವಯಂಕೃತ ಅಪರಾಧವಲ್ಲವೇ ?
ಒಳ್ಳೆಯ ಬೆಳೆ ಬೇಕು ಎಂಬ ಆಶಯ ತಪ್ಪಲ್ಲ ಆದರೆ ಕಿಸೀ ಬಿ ಕೀಮತ್ ಪರ್ ಎಂಬ ಹಿಂದಿಯ ಹೇಳಿಕೆಯಂತೆ ಖಂಡಿತವಾಗಿಯೂ ಅಲ್ಲ. ನಮ್ಮ ಹೆಚ್ಚಿನ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಅದೆಷ್ಟೇ ಕೆಳಮಟ್ಟಕ್ಕೆ ಇಳಿಯಲು ಮನುಷ್ಯ ಸಿದ್ದನಾಗಿದ್ದಾನೆ. ಉಳಿವಿಗಾಗಿನ ಈ ಹೋರಾಟದಲ್ಲಿ ಕೇವಲ ತನ್ನ ಉಳಿವಿನ ಕುರಿತು ಮಾತ್ರ ಯೋಚಿಸುತ್ತಿರುವ ಆತ ಅತಿಯಾದ ದುರಾಸೆಯಿಂದ ಭೂಮಿ ತಾಯಿಯ ಒಡಲಿಗೆ ವಿಷ ಹಾಕುತ್ತಿದ್ದಾನೆ. ಏನನ್ನಾದರೂ ತೆರುವ, ಎಷ್ಟನ್ನಾದರೂ ತೆರುವ ಮೂಲಕ ನಾವು ಫಲವತ್ತಾದ ಭೂಮಿ ತಾಯಿಯ ಮಡಿಲಿಗೆ ಹಾಲಾಹಲದಂತಹ ರಾಸಾಯನಿಕಗಳನ್ನು ಬೆರೆಸಿದರೆ ಆಕೆಯಾದರೂ ಹೇಗೆ ಸುಮ್ಮನಿದ್ದಾಳು ? ಅಮೃತದಂತಹ ಬದುಕನ್ನು ನಮಗೆ ಕೊಡಮಾಡಿರುವ ಭೂಮಿತಾಯಿಯ ಮಡಿಲಿನಲ್ಲಿ ಗರಿಕೆ ಹುಲ್ಲು ಕೂಡ ಬೆಳೆಯದಂತೆ ಬಂಜರು ಮಾಡಿ ಇದೀಗ ಗೋಳಿಟ್ಟರೆ ಏನು ಪ್ರಯೋಜನ ?
ಸಹಿಸಿ ಸಾಕಾದ ಆಕೆ ಕೂಡ ಧಗೆಯ ಒಡಲಾಗಿ ನಮಗೆ ಶಿಕ್ಷೆ ನೀಡುತ್ತಿದ್ದಾಳೆ.. ಇನ್ನು ಆಪೋಷನ ತೆಗೆದುಕೊಳ್ಳುವುದಷ್ಟೇ ಬಾಕಿ.
ಇನ್ನು ಭೂಮಿ ತಾಯಿಯ ಒಡಲಿಗೆ ನಾವು ಹಾಕಿದ ವಿಷ, ಕಾರ್ಖಾನೆಗಳ ರಾಸಾಯನಿಕಗಳು ನಾವು ಕುಡಿಯುವ ಗಂಗೆಯನ್ನು ಕಲುಷಿತಗೊಳಿಸಿದೆ. ತನ್ನ ಒಡಲಲ್ಲಿರುವ ಆಮ್ಲಜನಕವನ್ನು, ಲವಣ ಮತ್ತು ಖನಿಜಗಳನ್ನು ಪೋಷಕಾಂಶಗಳ ರೂಪದಲ್ಲಿ ನಮಗೆ ನೀರಿನ ಮೂಲಕ ನೀಡುವ, ನಾವೆಲ್ಲರೂ ಗಂಗಾಮಾತೆ ಎಂದು ಪೂಜಿಸುವ ಜಲವನ್ನು ಕಲುಷಿತಗೊಳಿಸಿದ ಮಹಾಪರಾಧ ಕೂಡ ನಮ್ಮದೇ. ನಾವು ಹುಲು ಮಾನವರಂತೆಯೇ ಜಲಚರಗಳು ಕೂಡ ನಿನ್ನ ಮಕ್ಕಳು.
ನಿನ್ನ ಒಡಲಿಗೆ ನಮ್ಮೆಲ್ಲ ಕಲ್ಮಶಗಳನ್ನು ಎಸೆಯುವ, ರಾಸಾಯನಿಕಗಳನ್ನು ಬೆರೆಸುವ, ನಿನ್ನೊಡಲನ್ನು ಮಲಿನಗೊಳಿಸುವ ನಿನ್ನಲ್ಲಿಯೇ ತಮ್ಮ ಬದುಕನ್ನು ಕಂಡುಕೊಂಡಿರುವ ನಿನ್ನ ಮಕ್ಕಳಾದ ಜಲಚರ ವಾಸಿಗಳಿಗೆ ಕೇಡು ಬಗೆಯುವ ನಮ್ಮ ಕುರಿತು ನಿನಗೆ ಪ್ರೀತಿಯಾದರೂ ಹೇಗೆ ಹುಟ್ಟೀತು ? ನಿನ್ನ ದ್ವೇಷಕ್ಕೂ ನಾವು ಅನರ್ಹರು ಎಂದು ಮಾತ್ರ ಹೇಳಬಲ್ಲೆ. ತಿಳಿಯದೆ ಮಾಡುವುದು ಮೂಢತನ ಎಂದಾದರೆ ತಿಳಿದು ಕೂಡ ಮಾಡುವ ನಮ್ಮ ಅಜ್ಞಾನಕ್ಕೆ ಬೆಲೆ ತೆರಬೇಕಾದವರು ನಾವೇ ಅಲ್ಲವೇ !


ಈ ಹಿಂದೆ ಪ್ರತಿಯೊಬ್ಬರ ಮನೆಗಳಲ್ಲಿ ಹಿತ್ತಲಿರುತ್ತಿತ್ತು ಅಲ್ಲಿ ದಿನಬಳಕೆಯ ತರಕಾರಿಗಳ ಜೊತೆಗೆ ಹೂವು ಹಣ್ಣು ಗಳ ಗಿಡಮರಗಳ ಜೊತೆಗೆ ದೊಡ್ಡದಾದ ಹುಣಸೆ ಮರಗಳು ಕೂಡ ಇರುತ್ತಿದ್ದವು . ನಮ್ಮ ದೈನಂದಿನ ಅವಶ್ಯಕತೆಗಳನ್ನು ಪೂರೈಸಿ ಇತರರಿಗೆ ಕೊಡುವಷ್ಟು ಕೂಡ ವಿಶಾಲತೆ ನಮ್ಮದಾಗಿತ್ತು. ಆದರೆ ಆಧುನಿಕತೆಯ ಹೆಸರಿನಲ್ಲಿ ಅಲಂಕಾರಿಕ ಗಿಡಗಳನ್ನು ಮಾತ್ರ ನೆಟ್ಟು ನೀರು ದೊರೆಯುವುದಿಲ್ಲ ಎಂಬ ನೆಪ ವಡ್ಡಿ ಗಿಡ ಮರಗಳಿಗೆ ಕೊಡಲಿ ಹಾಕಿರುವ ನಮ್ಮ ಬುದ್ಧಿಗೇಡಿತನಕ್ಕೆ ನೀನಾದರೂ ಏನು ಮಾಡುತ್ತಿ ?
ಆಗಲೂ ಕೂಡ ಬೇಸಿಗೆ ಇತ್ತು ಆದರೆ ದಿನದ ಕೆಲಸಗಳನ್ನು ಮಾಡಿ ಪೂರೈಸಿ ದಣಿದ ದೇಹ ಮನೆಯ ಹಿತ್ತಲಿನಲ್ಲಿ ಕಟ್ಟೆಯ ಮೇಲೆ ಮರದ ಕೆಳಗೆ ಬರಿ ನೆಲದ ಮೇಲೆ ಮಲಗಿದರು ಕೂಡ ಬೀಸುವ ಮರಗಳ ತಂಗಾಳಿ ನಮಗೆ ವಿಶ್ರಾಂತಿಯ ಜೊತೆಗೆ ನೆಮ್ಮದಿಯನ್ನು ಕೂಡ ನೀಡುತ್ತಿದ್ದವು.
ಈಗ ಮನೆ ಮನೆಗಳಲ್ಲಿ ಫ್ಯಾನ್‌ಗಳು, ಏರ್ ಕೂಲರ್ ಗಳು ಎಸಿಗಳ ಭರಾಟೆ ಇದೆ, ನಿಜ! ಆದರೆ ಭೂಮಿ ತಾಯಿಯ ಮಡಿಲಲ್ಲಿ ಬೆಳೆದ ಮರಗಳು ಕೊಡುವ ನೆರಳು ಮತ್ತು ಗಾಳಿಯನ್ನು ನೀಡಲು ಯಾರಿಂದಲೂ ಸಾಧ್ಯವಿಲ್ಲ. ನಮಗೆ ಶುದ್ಧ ಆಮ್ಲಜನಕವನ್ನು, ನೆರಳನ್ನು ಫಲ ಪುಷ್ಪಗಳನ್ನು ನೀಡುವ ಅಂತಹ ಮರಗಳನ್ನು ಬೇರು ಬಿಟ್ಟು ಕಾಂಪೌಂಡ್ ನಾಶ ಮಾಡುತ್ತವೆ ಎಂಬ ಕಾರಣಕ್ಕಾಗಿ ಕಡಿದೊಗೆದಿರುವ ನಾವು ಮನೆಯ ಯಾವ ಮೂಲೆಯಲ್ಲಿ ಹೋದರೂ ನೆಮ್ಮದಿಯ ನೆಳಲು ಕಾಣದೆ ನಿಟ್ಟುಸಿರು ಬಿಡುವಂತಹ ಪರಿಸ್ಥಿತಿ ನಮ್ಮದಾಗಿದೆ.
ಇನ್ನು ನಾವು ಬಳಸುವ ಎ.ಸಿ ಗಳು ವಾತಾವರಣದಲ್ಲಿ ಮೀಥೇನ್ ಅನಿಲವನ್ನು ಬಿಡುಗಡೆ ಮಾಡಿ ವಾಯು ಮಾಲಿನ್ಯವನ್ನು ಉಂಟು ಮಾಡುತ್ತವೆ. ಇದರ ಪ್ರಮಾಣ ಹೆಚ್ಚಿದಷ್ಟು ನಾವು ಮನುಷ್ಯರಿಗೆ ಅಪಾಯ ತಪ್ಪಿದ್ದಲ್ಲ.
ಭೂಮಿಯನ್ನು ಮಾತ್ರವಲ್ಲ ಆಕಾಶವನ್ನು ಕೂಡ ನಮ್ಮ ಅತಿಯಾದ ದಾಹಕ್ಕೆ ಆಪೋಷಣೆ ತೆಗೆದುಕೊಂಡು ಅಲ್ಲೂ ಕೂಡ ವಾಯು ಮಾಲಿನ್ಯದ ಮೂಲಕ ಹಾಳು ಮಾಡಿರುವ ನಮ್ಮ ಮೌಡ್ಯತೆಯನ್ನು ಸಹಿಸುವುದು ನಿನಗೆ ಕೂಡ ಅಸಾಧ್ಯ ಅಲ್ಲವೇ ?
ಹೀಗೆ ನೆಲ,ಜಲ, ವಾಯುವನ್ನು ಹಾಳು ಮಾಡಿರುವ ನಾವು ಗಿಡ ಮರಗಳನ್ನು ಕಡಿದೊಗೆದು ಪರಿಸರವನ್ನು ನಾಶ ಮಾಡಿದ್ದೇವೆ. ಪರಿಣಾಮವಾಗಿ ವಾತಾವರಣದ ತಾಪಮಾನ ಹೆಚ್ಚಾಗಿದೆ. ಸಹಸ್ರಾರು ವರ್ಷಗಳಿಂದ ಒಂದು ಸೆಂಟಿಮೀಟರ್ ಇನ್ನಷ್ಟು ಕರಗದ ಬೃಹದಾಕಾರದ ಹಿಮದ ನೀರ್ಗಲ್ಲುಗಳು ಇನ್ನಿಲ್ಲದಂತೆ ಕರಗಿ ಹರಿಯುತ್ತಿವೆ ಪರಿಣಾಮವಾಗಿ ವಿಪರೀತ ಬಿಸಿಲು ಚಳಿ ಮಳೆಗಳ ತೊಂದರೆಗಳಿಂದ ನಾವು ನಲುಗುತ್ತಿದ್ದೇವೆ.
ನಮ್ಮ ಪೂರ್ವಜರು ನಮಗೆ ಸ್ವಚ್ಚ,ಶುದ್ಧವಾದ ಹಾಗೂ ಬದುಕಲು ಯೋಗ್ಯವಾದ ಪರಿಸರವನ್ನು ನೀಡಿದ್ದರು ಅದು ಅವರ ಕರ್ತವ್ಯವಾಗಿತ್ತು. ಈ ಭೂಮಿಯ ಪ್ರಜೆಗಳಾದ ನಾವುಗಳು ನಮ್ಮ ಮುಂದಿನ ಪೀಳಿಗೆಗೆ ಅಷ್ಟೇ ಬದುಕಲು ಯೋಗ್ಯವಾದ ವಾತಾವರಣವನ್ನು ಹೊಂದಿರುವ ಪರಿಸರವನ್ನು ಬಿಟ್ಟು ಕೊಡಬೇಕಾದ ಜವಾಬ್ದಾರಿ ಹೊತ್ತಿದ್ದು ಆ ನಿಟ್ಟಿನಲ್ಲಿ ಇನ್ನು ಮುಂದೆ ಯಾದರೂ ಕಾರ್ಯನಿರ್ವಹಿಸಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಈಗಾಗಲೇ ಆಗಿ ಹೋಗಿರುವ ಪ್ರಮಾದವನ್ನು ಸರಿಪಡಿಸಲು ಇಂದಿನಿಂದಲೇ ಕಾರ್ಯ ನಿರ್ವಹಿಸುತ್ತೇವೆ ಎಂಬ ಭರವಸೆಯನ್ನು ಭೂಮಿಯ ವಾಸಿಗಳಾದ ನಾವು ನಿನಗೆ ನೀಡುತ್ತೇವೆ. ಇನ್ನಾದರೂ ನಿನ್ನ ಕೋಪ ತಾಪವನ್ನು ಬದಿಗಿಟ್ಟು ಎಳೆಯ ಹದವಾದ ಬಿಸಿಲನ್ನು ಮಾತ್ರ ನಮಗೆ ನೀಡು. ನಿನ್ನ ಮಕ್ಕಳನ್ನು ಕಾಪಾಡು ಎಂದು ಕೇಳಿಕೊಳ್ಳುವ
ನಿನ್ನ ಮಕ್ಕಳು

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ

ಮೇ.೨೪ ರಂದು ಪಂಚಮಸಾಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ
    In ವಿಶೇಷ ಲೇಖನ
  • ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಸುಡುವ ಸೂರ್ಯನಿಗೊಂದು ಪತ್ರ
    In ವಿಶೇಷ ಲೇಖನ
  • ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಮೇ.೨೪ ರಂದು ಪಂಚಮಸಾಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಮಕ್ಕಳೇ ಪ್ರಭುದ್ದ ಭಾರತದ ಆಸ್ತಿ :ಪಿಎಸೈ ಮಹೇಶ ಸಂಕ
    In (ರಾಜ್ಯ ) ಜಿಲ್ಲೆ
  • ಪ.ಬಂಗಾಳದಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರಲ್ಲಿ ಹೆಚ್ಚಿದ ಆತ್ಮವಿಶ್ವಾಸ
    In (ರಾಜ್ಯ ) ಜಿಲ್ಲೆ
  • ಭಕ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಶಕ್ತಿ ಮಹಾಗುರುಗಳಿಗಿದೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಲ್ಲಿ ಕುಂಠಿತವಾಗುತ್ತಿರುವ ಕ್ರೀಡಾಸಕ್ತಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸವಾಲುಗಳನ್ನು ಎದುರಿಸಲು ಸೇತುಬಂಧ ಸಹಕಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.