ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಕೆಯುಡಬ್ಲ್ಯೂಜೆ ಧನ್ಯವಾದ
ಉದಯರಶ್ಮಿ ದಿನಪತ್ರಿಕೆ
ಬೆಂಗಳೂರು: ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಹನುಮಂತಪ್ಪ ಹಳ್ಳಿಕೇರಿ ಅವರಿಗೆ ಆಸ್ಪತ್ರೆ ಚಿಕಿತ್ಸೆಗಾಗಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಹನುಮಂತಪ್ಪ ಹಳ್ಳಿಕೇರಿ ಅವರು ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದು, ಅದರ ಚಿಕಿತ್ಸೆಗಾಗಿ ಹೆಚ್ಚಿನ ಹಣಕಾಸು ನೆರವು ಅಗತ್ಯವಿತ್ತು.
ಈ ಬಗ್ಗೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)
ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದು ನೆರವು ಕೋರಿದ್ದರು.
ಶಾಸಕರು & ಕೆಯುಡಬ್ಲ್ಯೂಜೆ ಮನವಿ ಮೇರೆಗೆ ಪರಿಹಾರ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯಅವರಿಗೆ, ಈ ನಿಟ್ಟಿನಲ್ಲಿ ಸಹಕಾರ ನೀಡಿದ
ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಧನ್ಯವಾದ ಸಲ್ಲಿಸಿದೆ.

