ವಿಜಯಪುರ: ತಾಲೂಕು ಪಂಚಾಯತ, ನೆಹರು ಯುವ ಕೇಂದ್ರ, ಕೇಂದ್ರ ಸಂವಹನ ಇಲಾಖೆ, ಅಂಚೆ ಇಲಾಖೆ, ಭಾರತೀಯ ಸೇವಾದಳ, ಜಿಲ್ಲಾ ಎನ್.ಎಸ್.ಎಸ್ ಘಟಕ, ಸರಕಾರದ ವಿವಿಧ ಇಲಾಖೆಗಳು ಮತ್ತು ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ನನ್ನ ಮಣ್ಣು ನನ್ನ ದೇಶ ಅಭಿಯಾನ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಅಮೃತ ಕಳಶ ಯಾತ್ರಾ ಕಾರ್ಯಕ್ರಮಕ್ಕೆ ವಿಜಯಪುರ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ. ಹೊಂಗಯ್ಯ ಚಾಲನೆ ನೀಡಿ ಮಾತನಾಡಿದರು.
ಮಣ್ಣು ನಮ್ಮ ದೈನಂದಿನ ಬದುಕಿಗೆ ಬೇಕಾಗುವ ಎಲ್ಲವನ್ನು ತನ್ನ ಒಡಲಿನಲ್ಲಿ ಇರಿಸಿಕೊಂಡಿದೆ. ಸಕಲ ಜೀವಿಗಳಿಗೆ ಅನ್ನ ನೀಡುವುದು ಮಣ್ಣು. ಯೋಧರ ಗೌರವಾರ್ಥವಾಗಿ ಮಣ್ಣನ್ನು ಸಂಗ್ರಹಿಸಿ ಕಳುಹಿಸಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ರಾಹುಲ್ ಡೊಂಗ್ರೆ ಮಾತನಾಡಿದರು.
ಅಮೃತ ಕಳಶ ಯಾತ್ರೆ
ವಿಜಯಪುರ ತಾಲೂಕು ಪಂಚಾಯತ ಕಚೇರಿಯಿಂದ ಆರಂಭವಾಗಿ ಅಂಬೇಡ್ಕರ್ ವೃತ್ತದವರೆಗೆ ಸಂಚರಿಸಿ, ನೆಹರು ಯುವ ಕೇಂದ್ರ ಕಚೇರಿಯಲ್ಲಿ ಸಮಾಪ್ತಿಗೊಂಡಿತು. ಕಳಶಗಳನ್ನು ತಾಲೂಕು ಪಂಚಾಯತ ಅಧಿಕಾರಿಗಳು ನೆಹರು ಯುವ ಕೇಂದ್ರದ ಚಾಂಪಿಯನ್‌ಗಳಿಗೆ ಹಸ್ತಾಂತರಿಸಿದರು. ಕೇಂದ್ರ ಸಂವಹನ ಇಲಾಖೆಯ ಸಿ.ಕೆ ಸುರೇಶ್, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಜಾವೇದ್ ಜಮಾದಾರ್, ಬೇಬಿ ದೊಡ್ಡಮನಿ, ಜಿಲ್ಲಾ ಎನ್.ಎಸ್.ಎಸ್ ನೋಡಲ್ ಅಧಿಕಾರಿ ಡಾ. ಪ್ರಕಾಶ್ ಸಿ. ರಾಠೋಡ್ ಸೇರಿದಂತೆ ನಾನಾ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
Related Posts
Add A Comment