Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಬಬಲೇಶ್ವರ ಕ್ಷೇತ್ರ ರಾಜ್ಯದಲ್ಲಿಯೇ ಮೊದಲು
(ರಾಜ್ಯ ) ಜಿಲ್ಲೆ

ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಬಬಲೇಶ್ವರ ಕ್ಷೇತ್ರ ರಾಜ್ಯದಲ್ಲಿಯೇ ಮೊದಲು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.‌ ಬಿ. ಪಾಟೀಲ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಬಬಲೇಶ್ವರ ಮತಕ್ಷೇತ್ರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.‌ ಬಿ. ಪಾಟೀಲ ಹೇಳಿದ್ದಾರೆ.
ಬುಧವಾರ ತಿಕೋಟಾ ತಾಲೂಕಿನ ಮಲಕನದೇವರಹಟ್ಟಿ‌ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರೂ. 100 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೋಮದೇವರಹಟ್ಟಿ- ಮಲಕನದೇವರಹಟ್ಟಿ ವರೆಗೆ ಮೂಲಸೌಕರ್ಯ ಅಭಿವೃದ್ಧಿ ಅನುದಾನದಲ್ಲಿ ಜಿಲ್ಲಾ ಮುಖ್ಯ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಎಲ್ಲ ಫಲಾನುಭವಿಗಳಿಗೆ ತಲುಪಿಸಲಾಗಿದೆ ಎಂದು ಅವರು ಹೇಳಿದರು.
ನೀರಾವರಿ ಮತ್ತು‌ ಕೋಟಿ‌ ವೃಕ್ಷ ಅಭಿಯಾನದ ಪರಿಣಾಮ‌ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ಉಷ್ಣಾಂಶ 40 ಡಿ. ಸೆ. ದಾಟಿಲ್ಲ. ಮಲಕನದೇವರಹಟ್ಟಿ ಗ್ರಾಮದ ಎರಡು ಕೆರೆಗಳ ಕಾಮಗಾರಿ ಪೂರ್ಣಗೊಂಡಿದೆ. ‌ಮುಂಬರುವ ದಿನಗಳಲ್ಲಿ ನೀರು ತುಂಬಿಸಲಾಗುವುದು. ಬಾಬಾನಗರ ಬಳಿ‌ ಸುಮಾರು ಒಂದು ಟಿಎಂಸಿ ಸಾಮರ್ಥ್ಯದ ಡ್ಯಾಂ ನಿರ್ಮಿಸಲಾಗುತ್ತಿದ್ದು, ಮೂರ್ನಾಲ್ಕು‌ ತಿಂಗಳಲ್ಲಿ ಡಿಪಿಅರ್ ಮತ್ತು ಟೆಂಡರ್ ಪ್ರಕ್ರಿಯೆ ಮುಗಿಯಲಿದೆ. ‌ಅದರ ನಂತರ ಡ್ಯಾಂ‌ ಕಾಮಗಾರಿ ಪ್ರಾರಂಭವಾಗಿ ನಿಗದಿತ ಸಮಯದಲ್ಲಿ ಪೂರ್ಣವಾಗಲಿದೆ. ಇದರಿಂದ ಬೇಸಿಗೆಯಲ್ಲಿ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ‌. ಈಗ ಭೂಮಿಪೂಜೆ ನೆರವೇರಿಲಾದ ರಸ್ತೆಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ಸಮುದಾಯ ಭವನಕ್ಕೆ ಅನುದಾನ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.
ಜಿ.ಪಂ.ಮಾಜಿ‌ ಅಧ್ಯಕ್ಷ ಸೋಮನಾಥ ಬಾಗಲಕೋಟ ಮಾತನಾಡಿ, ಸಚಿವ ಎಂ. ಬಿ. ಪಾಟೀಲ ಅವರು ಈ ಭಾಗದಲ್ಲಿ ರಸ್ತೆ ಮತ್ತು ನೀರಾವರಿ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ, ವಿದ್ಯಾಧರ ಶರಣಯ್ಯ ಹಿರೇಮಠ, ದಯಾನಂದ ಹಿರೇಮಠ, ಸಿದ್ದು ಗೌಡನವರ, ಜಗದೀಶ ವಳಸಂಗ, ಚನ್ನಪ್ಪ ದಯಗೊಂಡ, ರಮೇಶ ಜಂಬಗಿ, ಮಲ್ಲಪ್ಪ ರಾಮೋಜಿ, ರವಿ ಹಿರೇಮಠ, ನಿಂಗವ್ವ ನಿಡೋಣಿ, ಭೀಮವ್ವ ಜಂಬಗಿ, ನೀರಾವರಿ ನಿಗಮದ ಎಇಇ ಅಂಬಣ್ಣ ಹರಳಯ್ಯ, ಲೋಕೋಪಯೋಗಿ ಇಲಾಖೆ ಎಇಇ ಪ್ರಮೋದ ಹಟ್ಟಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.