Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ

ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ

ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ
(ರಾಜ್ಯ ) ಜಿಲ್ಲೆ

ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವಣ್ಣನವರ ಸಾಮಾಜಿಕ ನ್ಯಾಯದಲ್ಲಿ ನನಗೆ ನಂಬಿಕೆ | ಸಂಪತ್ತು- ಆಡಳಿತ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಬೇಕು | ಸಿಎಂ ಸಿದ್ದರಾಮಯ್ಯ ಹೇಳಿಕೆ

ಮೈಸೂರು: ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದಿಂದ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಸಮಸಮಾಜ ನಿರ್ಮಿಸುವ ಸಂಕಲ್ಪವನ್ನು ಸರ್ಕಾರ ಹೊಂದಿದೆ. ಉತ್ಪಾದಿಸಿದ ಸಂಪತ್ತು ಸಮಾನವಾಗಿ ಹಂಚಿಕೆಯಾಗಿಬೇಕು. ರಾಜ್ಯದ ಸರ್ವರಿಗೂ ಸಮಪಾಲು, ಸಮಬಾಳು ಸಿಗಬೇಕೆಂಬುದೇ ಸರ್ಕಾರದ ಉದ್ದೇಶ ಎಂದರು.
ಸಿದ್ದರಾಮೇಶ್ವರರೂ ಸೇರಿದಂತೆ ಸಂತಮಹಾಶಯರು, ಸಮಾಜದಲ್ಲಿ ಜಾತಿವರ್ಗಗಳ ವ್ಯವಸ್ಥೆಗಳು ತೊಲಗಬೇಕು ಎಂದು ಬಯಸಿದ್ದರು. ಬಸವಾದಿ ಶರಣರು 12 ನೇ ಶತಮಾನದಲ್ಲಿ ಸಮಾನತೆಯ ಸಿದ್ಧಾಂತವನ್ನು ಬೋಧಿಸಿದ್ದರು. ಶೋಷಣೆಗೊಳಗಾದ ಹಾಗೂ ಅವಕಾಶವಂಚಿತ ಸಮುದಾಯಗಳು ಸಂಘಟಿತರಾಗುವ ಸಮ್ಮೇಳನಗಳು ಉತ್ತಮ ಕಾರ್ಯಗಳಾಗಿವೆ ಎಂದು ತಿಳಿಸಿದರು.
ಬಸವಣ್ಣನವರು ಬೋಧಿಸಿದಂತೆ ಸಾಮಾಜಿಕ ನ್ಯಾಯದಲ್ಲಿ ನಾನು ನಂಬಿಕೆಯಿರಿಸಿದ್ದೇನೆ. ರಾಜಕೀಯ ಸ್ವಾತಂತ್ರ್ಯ ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ. ಶಿಕ್ಷಣ ಪಡೆದಾಗ ಮಾತ್ರ ಸಾಮಾಜಿಕ ಆರ್ಥಿಕ ಶಕ್ತಿ ದೊರಕಲು ಸಾಧ್ಯ ಎಂದು ಹೇಳಿದರು.
ನಮ್ಮ ಸರ್ಕಾರ ಭೋವಿ ನಿಗಮವೂ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲವನ್ನು ಮನ್ನಾ ಮಾಡಲಾಗಿದೆ. ಪರಿಶಿಷ್ಟ ಜಾತಿಯ ಸಮುದಾಯಗಳಲ್ಲಿನ ಅಸಮಾನತೆ ಹೋಗಲಾಡಿಸಲು ಐತಿಹಾಸಿಕ ಒಳ ಮೀಸಲಾತಿಯನ್ನು ಜಾರಿಗೊಳಿಸಿದೆ ಎಡಗೈಗೆ ಶೇ. 5.25 , ಬಲಗೈಗೆ ಶೇ.5.25 ಹಾಗೂ ಇತರ ಉಪಜಾತಿಗಳಿಗೆ ಶೇ.4.5 ರಷ್ಟು ಹಂಚಿಕೆ ಮಾಡಲಾಗಿದೆ ಎಂದರು.
ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ: ಈಗ ಜಾತಿ ಸಮೀಕ್ಷೆ ನಡೆಯುತ್ತಿದ್ದು, ಜಾತಿ ಸಮೀಕ್ಷೆ ವರದಿ ಬಂದ ನಂತರ ಚರ್ಚೆ ಮಾಡೋಣ ಎಂದರು. ನಮ್ಮ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಯಾರಿಗೂ ಅನ್ಯಾಯವಾಗಬಾರದು, ನೂರಕ್ಕೆ ನೂರು ಅಲ್ಲದಿದ್ದರೂ 99% ನ್ಯಾಯ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.
ಅವಕಾಶಗಳಿಂದ ಯಾರೂ ವಂಚಿತರಾಗಬಾರದು: ಸಮುದಾಯದವರು ಇಟ್ಟಿರುವ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿದ ಮುಖ್ಯಮಂತ್ರಿಗಳು ಸಮುದಾಯದವರಿಗೆ ಕುಲಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

“ಸಹಿಷ್ಣುತೆಯನ್ನು ರೂಡಿಸಿಕೊಳ್ಳಬೇಕು: ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಸಂವಿಧಾನದ ಮೂಲ ತತ್ವಗಳು. ಜಡತ್ವದಿಂದ ಕೂಡಿರುವ ಜಾತಿ ವ್ಯವಸ್ಥೆಯನ್ನು ಸುಧಾರಿಸಬೇಕಿದೆ. ಎಲ್ಲಾ ಜಾತಿಗಳನ್ನು ಪ್ರೀತಿಸಿ, ಅವರೂ ನಮ್ಮನ್ನು ಪ್ರೀತಿಸುವಂತೆ ಮಾಡಬೇಕು ಹಾಗೂ ಸಹಿಷ್ಣುತೆಯನ್ನು ರೂಡಿಸಿಕೊಳ್ಳಬೇಕು. ಉತ್ಪಾದನೆಯಲ್ಲಿ ಎಲ್ಲರೂ ಭಾಗವಹಿ ಉತ್ಪನ್ನವನ್ನು ಸಮಾನವಾಗಿ ಹಂಚಿಕೊಳ್ಳಬೇಕು ಎಂದು ಸಿದ್ಧರಾಮೇಶ್ವರರು ನಮಗೆ ಬೋಧಿಸಿದ್ದರು. ಅವರು ನಡೆದ ಹಾದಿಯಲ್ಲಿಯೇ ನಮ್ಮ ಸರ್ಕಾರವೂ ನಡೆಯುತ್ತಿದೆ.”

– ಸಿದ್ದರಾಮಯ್ಯ
ಮುಖ್ಯಮಂತ್ರಿಗಳು

ಗ್ಯಾರಂಟಿ ಯೋಜನೆಗಳು ಮಹಿಳಾ ಸಮೂಹಕ್ಕೆ ವರದಾನ

ಗ್ಯಾರಂಟಿ ಯೋಜನೆಗಳು ಮಹಿಳಾ ಸಮೂಹಕ್ಕೆ ವರದಾನವಾಗಿವೆ. ಆರ್ಥಿಕವಾಗಿ ಶಕ್ತಿಯಿಲ್ಲದವರಿಗೆ ಗ್ಯಾರಂಟಿ ಯೋಜನೆಗಳನ್ನು ಸಮಾನವಾಗಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ತಾರತಮ್ಯವಿಲ್ಲದೇ ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ

ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ

ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಬಬಲೇಶ್ವರ ಕ್ಷೇತ್ರ ರಾಜ್ಯದಲ್ಲಿಯೇ ಮೊದಲು

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಏರಿಕೆ ಖಂಡಿಸಿ ಆಪ್ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಮಾಜಿಕ ನ್ಯಾಯಕ್ಕೆ ನಮ್ಮ ಸರ್ಕಾರ ಬದ್ಧ :ಸಿಎಂ
    In (ರಾಜ್ಯ ) ಜಿಲ್ಲೆ
  • ವ್ಯವಸ್ಥಿತ & ಅರ್ಥಪೂರ್ಣವಾಗಿ ನಡೆದ ಬೀದರ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಅನ್ನದಾತ ಅತಂತ್ರ, ಬೆಳೆಹಾನಿ ಪರಿಹಾರ ಹೆಚ್ಚಳಕ್ಕೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಯೋಜನೆಗಳ ಅನುಷ್ಠಾನ: ಬಬಲೇಶ್ವರ ಕ್ಷೇತ್ರ ರಾಜ್ಯದಲ್ಲಿಯೇ ಮೊದಲು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಏರಿಕೆ ಖಂಡಿಸಿ ಆಪ್ ಮನವಿ
    In (ರಾಜ್ಯ ) ಜಿಲ್ಲೆ
  • ಮೇ ೧೧ ರಿಂದ ಅಲರ್ಜಿ, ಅಸ್ತಮಾ, ಕೆಮ್ಮು, ದಮ್ಮು ರೋಗಕ್ಕೆ ಉಚಿತ ತಪಾಸಣೆ
    In (ರಾಜ್ಯ ) ಜಿಲ್ಲೆ
  • ಸರ್ವ ಸಮುದಾಯದ ಜನರನ್ನು ಸಮಾನವಾಗಿ ಕಂಡ ಯಡಿಯೂರಪ್ಪ
    In (ರಾಜ್ಯ ) ಜಿಲ್ಲೆ
  • ಜಮಖಂಡಿಯ ಸ್ನಾತಕೋತ್ತರ ಕೇಂದ್ರದಲ್ಲಿ ಕ್ಯಾಂಪಸ್ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ಅಫಜಲಪುರದಲ್ಲಿ ಕಸಾಪ ಸಂಸ್ಥಾಪನಾ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಶೂನ್ಯದಿಂದ ಶಿಖರದೆತ್ತರಕ್ಕೆ ಏರಬೇಕೆ?
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.