ಉದಯರಶ್ಮಿ ದಿನಪತ್ರಿಕೆ
ಚಡಚಣ: ಬೇಸಿಗೆ ಆರಂಭವಾಗುತ್ತಿದ್ದಂತೆ ಭೀಮಾ ನದಿ ಬತ್ತಿ ಹೋಗಿ, ಪಶು-ಪಕ್ಷಿ, ಜನ-ಜಾನುವಾರುಗಳಿಗೆ ನೀರಿನ ಹಾಹಾಕಾರ ಉಲ್ಬಣಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಉಜನಿ ಜಲಾಶಯದಿಂದ ನೀರು ಬಿಡುಗಡೆ ಮಾಡಿದೆ. ಪಂಡರಪುರ ಹಾಗೂ ಸೊಲ್ಲಾಪುರ ನಗರಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಭೀಮಾ ನದಿಗೆ ನೀರು ಹರಿಸಿದೆ.
ಇದರಿಂದ ಕರ್ನಾಟಕದ ಇಂಡಿ, ಆಲಮೇಲ, ಆಫಜಲಪುರ, ಯಾದಗಿರಿ, ಗುಲ್ಬರ್ಗ, ರಾಯಚೂರು ನಗರಗಳ ಭೀಮಾತೀರದ ಗ್ರಾಮಗಳಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ.
ಬಿಸಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದ ಪಶು-ಪಕ್ಷಿ, ಜನ-ಜಾನುವಾರುಗಳು ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.

