ಸಿಂದಗಿಯಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಅಶೋಕ ಮನಗೂಳಿ ಗುತ್ತಿಗೆದಾರ ಗೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಸಮುದಾಯದ ಅಗತ್ಯಗಳಿಗೆ ತಕ್ಕಂತೆ ಈ ಭವನ ನಿರ್ಮಾಣವಾಗಬೇಕು. ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಜನರಿಗೆ ಉಪಯುಕ್ತವಾಗುವಂತೆ ಕಟ್ಟಡ ನಿರ್ಮಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿರುವ ಶ್ರೀ ಗಣಪತಿ ದೇವಸ್ಥಾನದಲ್ಲಿ ಲೋಕೋಪಯೋಗಿ ಇಲಾಖೆಯ ೨೦೨೫-೨೬ನೇ ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ರೂ.೨೫ ಲಕ್ಷ ವೆಚ್ಚದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸಮುದಾಯ ಭಾವನಗಳ ನಿರ್ಮಾಣವು ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತದೆ. ಈ ಸಮುದಾಯ ಭವನ ಸಮಾಜದ ವಿವಿಧ ಸಭೆ-ಸಮಾರಂಭಗಳಿಗೆ ಉಪಯೋಗವಾಗಲಿ. ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು. ರೂ.೨೫ ಲಕ್ಷ ವೆಚ್ಚದ ಈ ಸಮುದಾಯ ಭವನ ನಿರ್ಮಾಣದಿಂದ ಸಾರ್ವಜನಿಕರಿಗೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ.
ಇದೇ ಸಂದರ್ಭದಲ್ಲಿ ಮಹಾದೇವಪ್ಪ ಮುಂಡೇವಾಡಗಿ, ಅಶೋಕ ವಾರದ, ಉಮೇಶ ಜೋಗುರ, ಮುತ್ತು ಮುಂಡೇವಾಡಗಿ, ರಾಜಶೇಖರ ಶಹಾಪುರ, ಬಸಯ್ಯ ಹಿರೇಮಠ, ಶ್ರೀಶೈಲ ನಂದಿಕೋಲ, ಅಶೋಕ ತೆಗ್ಗೆಳ್ಳಿ, ರವಿ ನಾವಿ ಸೇರಿದಂತೆ ಸ್ಥಳೀಯ ಮುಖಂಡರು, ಎಪಿಎಂಸಿ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಎಪಿಎಂಸಿ ಗಣ್ಯ ವ್ಯಾಪಾರಸ್ಥರು, ಎಪಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ನಾಮ ನಿರ್ದೇಶನ ಸದಸ್ಯರು, ಹಿರಿಯ ಮುಖಂಡರು, ಕಾರ್ಯಕರ್ತರು, ಸೇರಿದಂತೆ ಯುವ ಮಿತ್ರರು, ಸ್ಥಳೀಯರು ಉಪಸ್ಥಿತರಿದ್ದರು.

