Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಟ್ಕಳ್ ದುರ್ಘಟನೆಯಲ್ಲಿ ಅನಾಥರಾದ ಮಕ್ಕಳಿಗೆ ವಿಶೇಷ ನೆರವು ಕಲ್ಪಿಸಿ
(ರಾಜ್ಯ ) ಜಿಲ್ಲೆ

ಭಟ್ಕಳ್ ದುರ್ಘಟನೆಯಲ್ಲಿ ಅನಾಥರಾದ ಮಕ್ಕಳಿಗೆ ವಿಶೇಷ ನೆರವು ಕಲ್ಪಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ಬಾಲವಿಕಾಸ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಆಗ್ರಹಿಸಿ ಮುಖ್ಯಮಂತ್ರಿಗೆ ಪತ್ರ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಟ್ಕಳ ತಾಲೂಕಿನ ಪಳ್ಳಿಹೊಳೆಯಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಾಗಿ ಹತ್ತು ಜನ ಸಾವಿಗೀಡಾಗಿದ್ದು ಅತ್ಯಂತ ನೋವಿನ ಸಂಗತಿಯಾಗಿದೆ. ಈ ದುರ್ಘಟನೆಯಿಂದಾಗಿ 24 ಮಕ್ಕಳ ಬದುಕು ಅತಂತ್ರವಾಗಿದೆ. ಈ ಮಕ್ಕಳು ಅನಾಥರಾಗಿದ್ದು, ತಕ್ಷಣ ಅವರ ಶಿಕ್ಷಣ ಮುಗಿಯುವವರೆಗೆ ವಸತಿಯುತ ಉಚಿತ ಶಿಕ್ಷಣ ನೀಡುವುದರ ಜೊತೆಗೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಆಗ್ರಹಿಸಿದ್ದಾರೆ.
ಈ ಕುರಿತು ಸೋಮವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು, ಈ ಕುಟುಂಬಗಳಿಗೆ ತುರ್ತು ಪರಿಹಾರ ಘೋಷಿಸಿರುವ ಮುಖ್ಯಮಂತ್ರಿಗಳ ಕಳಕಳಿಗೆ ನಾನು ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕರ್ನಾಟಕದಲ್ಲಿರುವ ಅನಾಥ ಮಕ್ಕಳು ಸರಕಾರ ನಡೆಸುವ ಬಾಲಮಂದಿರದಲ್ಲಿ ಹಾಗೂ ವಿವಿಧ ಮಠಮಾನ್ಯಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳಲ್ಲಿ ಆಶ್ರಯ ಪಡೆದಿದ್ದಾರೆ. ಈ ನಾಡಿನ ಎಲ್ಲಾ ಅನಾಥ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ವಿಶೇಷ ಮೀಸಲಾತಿ ಕಲ್ಪಿಸುವುದರ ಮೂಲಕ ಅವರ ಬಾಳಿಗೆ ಮಾನ್ಯ ಮುಖ್ಯಮಂತ್ರಿಗಳು ಬೆಳಕಾಗಬೇಕೆಂದು ಸಂಗಮೇಶ ಬಬಲೇಶ್ವರ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು “ಮುಖ್ಯಮಂತ್ರಿಗಳು ಹಲವಾರು ಭಾಗ್ಯಗಳನ್ನು ನೀಡುವುದರ ಮೂಲಕ ರಾಜ್ಯದ ಭಾಗ್ಯವಿಧತರಾಗಿರುವ ಅವರು. ಈ ನಾಡಿನ ಎಲ್ಲಾ ಅನಾಥ ಮಕ್ಕಳ ಬಾಳಿಗೆ, ತಂದೆ ತಾಯಿಯ ಸ್ಥಾನದಲ್ಲಿ ನಿಂತು ಆ ಪ್ರೀತಿಯನ್ನು ನೀಡಿದ ತಾಯಿ ಹೃದಯದ ಮುಖ್ಯಮಂತ್ರಿಯಾಗಿ ಅನಾಥ ಮಕ್ಕಳ ಪಾಲಿನ ಭಾಗ್ಯವಿದಾತರಾಗಬೇಕೆಂದು ಸಂಗಮೇಶ್ ಬಬಲೇಶ್ವರ ಕಳಕಳಿಯಿಂದ ವಿನಂತಿಸಿಕೊಂಡಿದ್ದಾರೆ.
ರಾಜ್ಯದ ಹಿರಿಯ ಅಧಿಕಾರಿಗಳ ತಂಡವನ್ನು ಪಕ್ಕದ ಮಹಾರಾಷ್ಟ್ರಕ್ಕೆ ಕಳಿಸಿ, ಮಹಾರಾಷ್ಟ್ರ ಸರಕಾರ ಅನಾಥ ಮಕ್ಕಳಿಗಾಗಿ ವಿಶೇಷ ಮೀಸಲಾತಿ ಕಲ್ಪಿಸಿರುವ ಕುರಿತಾದ ಸಮಗ್ರ ವರದಿಯನ್ನು ತರಿಸಿ, ಅದರಲ್ಲಿರುವ ಅಂಶಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ, ನಮ್ಮ ರಾಜ್ಯದಲ್ಲಿ ಅನಾಥ ಮಕ್ಕಳಿಗಾಗಿ ವಿಶೇಷ ಸವಲತ್ತುಗಳಿರುವ ವಿಶೇಷ ಮೀಸಲಾತಿಯನ್ನು ಕಲ್ಪಿಸಬೇಕೆಂದು ಬಬಲೆಶ್ವರ ಸರಕಾರವನ್ನು ಒತ್ತಾಯಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.