Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಕ್ರೀದ್ ಹಿನ್ನೆಲೆ ಕಟ್ಟೆಚ್ಚರಕ್ಕೆ ಎಎಸ್ಪಿ ರಾಮನಗೌಡ ಸೂಚನೆ
(ರಾಜ್ಯ ) ಜಿಲ್ಲೆ

ಬಕ್ರೀದ್ ಹಿನ್ನೆಲೆ ಕಟ್ಟೆಚ್ಚರಕ್ಕೆ ಎಎಸ್ಪಿ ರಾಮನಗೌಡ ಸೂಚನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳಲ್ಲಿ ಅನಧಿಕೃತವಾಗಿ ಜಾನುವಾರುಗಳ ಸಾಗಣೆಯಾಗದಂತೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೌಡ ಹಟ್ಟಿ ಹೇಳಿದರು. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸಹಯೋಗದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಾಖಲೆಗಳಿಲ್ಲದೆ ಜಾನುವಾರುಗಳ ಸಾಗಣೆ ಮಾಡುವುದು ಕಾನೂನಿನ ವಿರುದ್ಧವಾಗಿದೆ. ಹಾಗಾಗಿ ಅಕ್ರಮವಾಗಿ ಜಾನುವಾರುಗಳ ಸಾಗಣೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು. ಜಾನುವಾರು ಖರೀದಿ ಹಾಗೂ ಮಾರಾಟ ಮಾಡುವ ವೇಳೆ ಜಾನುವಾರುಗಳಿಗೆ ಕಿವಿಯೋಲೆ ಇರುವುದು ಕಡ್ಡಾಯ. ಸಾಗಾಣಿಕೆ ಸಂಬಂಧಪಟ್ಟಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಧೃಡೀಕರಣ ಪತ್ರ ಕಡ್ಡಾಯವಾಗಿದೆ. ಎಲ್ಲ ಜಾನುವಾರುಗಳ ಮಾಲೀಕರಿಗೆ ಮನವೊಲಿಸಿ ಕಿವಿಯೋಲೆ ಹಾಕುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು. ಬಕ್ರೀದ್ ಹಬ್ಬದ ಮುನ್ನಾ ದಿನವಾದ ಮೇ ೨೭ ಹಾಗೂ ಮೇ ೨೮ರಂದು ಜಾನುವಾರುಗಳ ಅಕ್ರಮ ವಧೆ ಹಾಗೂ ಸಾಗಣೆ ತಡೆಗಟ್ಟಲು ನಗರಪಾಲಿಕೆ, ಪಶುಪಾಲನಾ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳ ತಂಡ ರಚಿಸಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಕೈಕೊಳ್ಳಬೇಕು. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಆಯುಕ್ತರು ತಂಡಗಳನ್ನು ರಚಿಸಿ ಅದರ ಮೇಲುಸ್ತುವಾರಿ ವಹಿಸಿಕೊಳ್ಳಬೇಕು ಎಂದು ಅವರು ಸಭೆಗೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಮಾತನಾಡಿ, ಜಿಲ್ಲೆಯ ತಾಲೂಕಾ ವ್ಯಾಪ್ತಿಯಲ್ಲಿರುವ ತಹಶೀಲ್ದಾರ್ ನೇತೃತ್ವದಲ್ಲಿ ನಗರ, ಪುರಸಭೆ, ಪಟ್ಟಣಪಂಚಾಯತ ವ್ಯಾಪ್ತಿಯಲ್ಲಿ ಸಂಬಂಧಪಟ್ಟ ಆಯುಕ್ತರು ಹಾಗೂ ಮುಖ್ಯ ಅಧಿಕಾರಿಗಳ ನೇತೃತ್ವದಲ್ಲಿ, ಪಶು ಸಂಗೋಪನಾ ಇಲಾಖೆ ಮತ್ತು ಪೋಲಿಸ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಒಳಗೊಂಡಂತೆ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಬೇಕು. ತಿಡಗುಂದಿ ಟೋಲ್ ಗೇಟ್, ಧೂಳಖೇಡ, ಸೊಲಾಪುರ ನಾಕಾ, ಹಾಗೂ ಜಮಖಂಡಿ ನಾಕಾಗಳಲ್ಲಿ ಹೆಚ್ಚುವರಿ ತಂಡಗಳನ್ನು ರಚಿಸಬೇಕು ಸೂಚಿಸಿದರು. ಒಂದು ವೇಳೆ ವಶಪಡಿಸಿಕೊಂಡ ಗೋವುಗಳನ್ನು ತಕ್ಷಣ ಹತ್ತಿರದ ಗೋಶಾಲೆಗಳಿಗೆ ಹಸ್ತಾಂತರಿಲು ಕ್ರಮ ವಹಿಸಬೇಕು. ಪಶು ಸಂಗೋಪನಾ ಇಲಾಖೆಯಲ್ಲಿ ವಾಹನಗಳ ಕೊರತೆ ಇದ್ದು ಈ ಸಂದರ್ಭದಲ್ಲಿ ಪ್ರತಿ ತಂಡಕ್ಕೆ ಒಂದರಂತೆ ವಾಹನಗಳನ್ನು ಒದಗಿಸಲು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಅನಧಿಕೃತವಾಗಿ ಜಾನುವಾರು ಸಾಗಣೆ ಮಾಡುವ ವಾಹನಗಳ ನೋಂದಣಿ ರದ್ದುಪಡಿಸಬೇಕು. ಕರ್ನಾಟಕ ಜಾನುವಾರು ಹತ್ಯೆ ಪ್ರಬಂಧಕ ಮತ್ತು ಸಂರಕ್ಷಣಾ ಕಾಯ್ದೆಯನ್ವಯ ಯಾವುದೇ ರೀತಿಯ ಜಾನುವಾರುಗಳು ಎಲ್ಲ ವಯಸ್ಸಿನ ಆಕಳು, ಆಕಳು ಕರು, ಹೋರಿ, ಎತ್ತು ಅಲ್ಲದೆ ೧೩ ವರ್ಷದೊಳಗಿನ ಎಮ್ಮೆ ಕೋಣಗಳನ್ನು ಹತ್ಯೆ ಮಾಡುವಂತಿಲ್ಲ. ಉಚ್ಚ ನ್ಯಾಯ್ಯಾಲಯದ ಆದೇಶದನ್ವಯ ಒಂಟಿಗಳನ್ನು ಕೂಡ ಬಕ್ರೀದ ಸಂದರ್ಭದಲ್ಲಿ ಹತ್ಯೆ ಮಾಡುವಂತಿಲ್ಲ. ಬಕ್ರೀದ್ ಹಿನ್ನೆಲೆಯಲ್ಲಿ ಜಾನುವಾರುಗಳ ಅಕ್ರಮ ಸಾಗಣೆ ಹಾಗೂ ವಧೆಗಳ ಬಗ್ಗೆ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಇಲ್ಲವೇ ಹತ್ತಿರ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಬೇಕು ಎಂದರು. ಬಕ್ರೀದ ಸಂದರ್ಭದಲ್ಲಿ ಯಾವುದೇ ರೀತಿಯ ಕಾಯ್ದೆ ಉಲ್ಲಂಘನೆಯಾಗದಂತೆ ಯಾವುದೇ ಸಮಸ್ಯಗಳಾಗದಂತೆ ಕರ್ತವ್ಯ ರ್ನಿಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಪ್ರಾಣಿ ಕಲ್ಯಾಣ ಮಂಡಳಿಯು ಭಾರತದ ಪ್ರಾಣಿ ಕಲ್ಯಾಣ ಮತ್ತು ಸಂರಕ್ಷಣಾ ಕಾನೂನು, ಪ್ರಾಣಿಗಳ ಜನನ ನಿಯಂತ್ರಣ ನಿಯಮ -೨೦೨೩ ಹಾಗೂ ಭಾರತದಲ್ಲಿ ನೀವು ತಿಳಿದಿರಲೇಬೇಕಾದಂಥಹ ಪ್ರಾಣಿಗಳ ಕಾನೂನು ಕುರಿತು ಕರ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಪ್ರಭಾರಿ ಉಪ ನಿರ್ದೇಶಕರಾದ ಡಾ. ಪ್ರಲ್ಹಾದ ಪಾಟೀಲ, ಮುಖ್ಯ ಪಶು ವೈದ್ಯಾಧಿಕಾರಿಗಳಾದ ಡಾ. ಸುಜಾತಾ, ಡಾ. ಶಿವಾನಂದ ಮೇಟಿ, ಡಾ. ಯು.ಜೆ. ನಾಲಾ, ಡಾ. ಬಿ.ಎಸ್ ಕನಮಡಿ, ಡಾ. ವೆಂಕಟೇಶ ವಾಲಿಕಾರ, ಡಾ. ಶರಣಗೌಡ ಬಿರಾದಾರ,ಡಾ. ಧರಮಪ್ಪ ರಾಠೋಡ, ಡಾ. ತಜಪಶೆಟ್ಟಿ, ಡಾ. ರಾಮು ರಾಠೋಡ, ಡಾ. ಹಿರೇಮಠ, ಡಾ. ಪ್ರವೀಣ ಸುರಪುರ, ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ, ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026

ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ

ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು

ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 08,2026
    In ದಿನಪತ್ರಿಕೆ
  • ಜನಪದ ಸಂಗಮ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಭೋವಿ ಸಮಾಜದ ಆರ್ಥಿಕ ಸಬಲೀಕರಣಕ್ಕೆ ಒತ್ತು
    In (ರಾಜ್ಯ ) ಜಿಲ್ಲೆ
  • ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಶಕ್ತಿ :ಆರ್.ಡಿ.ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಎಚ್.ಟಿ.ಕುಲಕರ್ಣಿ ಸರ್
    In (ರಾಜ್ಯ ) ಜಿಲ್ಲೆ
  • ಗೋಲಗೇರಿ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳದ ದಾನ-ಧರ್ಮದ ಪರಂಪರೆ ಸಮಾಜಕ್ಕೆ ಪ್ರೇರಣೆ
    In (ರಾಜ್ಯ ) ಜಿಲ್ಲೆ
  • ಗಣೇಶ ಹಬ್ಬದಲ್ಲಿ ಇಲಾಖೆ ನಿಯಮಾವಳಿ ಪಾಲಿಸಿ :ಪಿಎಸೈ
    In (ರಾಜ್ಯ ) ಜಿಲ್ಲೆ
  • ವಿದ್ಯೆ ನೀಡುವ ಪವಿತ್ರ ಕಾರ್ಯಗೈವ ಶಿಕ್ಷಕ ರಾಷ್ಟ್ರ ರಕ್ಷಕ
    In (ರಾಜ್ಯ ) ಜಿಲ್ಲೆ
  • ಅಕ್ರಮ ಸಾಗಿಸುತ್ತಿದ್ದ ೩೦ ಚೀಲ ಅಕ್ಕಿ ಜಪ್ತಿ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.