ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ದೇಶಿ ಯೋಜನೆಯಡಿಯಲ್ಲಿ ಖಾಲಿ ಇರುವ ಫೆಸಿಲಿಟೇಟರ್ ಹುದ್ದೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ೨ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕೃಷಿಯಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ವಿಭಾಗದ ಹುದ್ದೆಗಳ ಅನುಭವ ಹೊಂದಿರಬೇಕು. ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆ ಎರಡು ಪ್ರತಿಗಳೊಂದಿಗೆ ದಿನಾಂಕ :೫-೦೬-೨೦೨೬ರಂದು ಬೆಳಿಗ್ಗೆ ೧೦ ಗಂಟೆಗೆ ಸಹ ವಿಸ್ತರಣಾ ನಿರ್ದೇಶಕರು ಕೃಷಿ ವಿಸ್ತರಣಾ ಕೇಂದ್ರ ವಿಜಯಪುರದಲ್ಲಿ ನಡೆಯುವ ಸಂದರ್ಶನಕ್ಕೆ ಎಲ್ಲ ಮೂಲ ದಾಖಲೆಗಳನ್ನು ಹಾಗೂ ದೃಢೀಕೃತ ಎರಡು ಪ್ರತಿಗಳೊಂದಿಗೆ ಹಾಜರಾಗಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹ ವಿಸ್ತರಣಾ ನಿರ್ದೇಶಕರು ಕೃಷಿ ವಿಸ್ತರಣಾ ಕೇಂದ್ರ ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
