Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೀನುಗಾರ ಸಮುದಾಯದ ನಾಯಕ ಮಂಜುನಾಥ ಗೆ ಎಂಎಲ್ಸಿ ಸ್ಥಾನ ನೀಡಿ
(ರಾಜ್ಯ ) ಜಿಲ್ಲೆ

ಮೀನುಗಾರ ಸಮುದಾಯದ ನಾಯಕ ಮಂಜುನಾಥ ಗೆ ಎಂಎಲ್ಸಿ ಸ್ಥಾನ ನೀಡಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಜ್ಯದ ವಿವಿಧ ಮೀನುಗಾರ ಸಂಘಟನೆಗಳು, ಸಮಾಜದ ಮುಖಂಡರು ಹಾಗೂ ಸಾರ್ವಜನಿಕ ವಲಯದ ಗಣ್ಯರಿಂದ ಸರ್ಕಾರಕ್ಕೆ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ರಾಜ್ಯದ ಮೀನುಗಾರ ಸಮುದಾಯದ ಹಕ್ಕುಗಳು, ಸಾಮಾಜಿಕ ನ್ಯಾಯ, ರಾಜಕೀಯ ಪ್ರಾತಿನಿಧ್ಯ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ನಿರಂತರ ಹೋರಾಟ ನಡೆಸುತ್ತಿರುವ ಕೆಪಿಸಿಸಿ ಮೀನುಗಾರರ ವಿಭಾಗದ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಮೀನುಗಾರರ ಸಂಘದ ಕರ್ನಾಟಕ ರಾಜ್ಯಾಧ್ಯಕ್ಷ ಮಂಜುನಾಥ ಭೀ ಸುಣಗಾರ ಅವರನ್ನು ಕರ್ನಾಟಕ ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ರಾಜ್ಯದ ವಿವಿಧ ಮೀನುಗಾರ ಸಂಘಟನೆಗಳು, ಸಮಾಜದ ಮುಖಂಡರು, ಯುವ ನಾಯಕರು ಹಾಗೂ ಸಾರ್ವಜನಿಕ ವಲಯದ ಗಣ್ಯರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಮಂಜುನಾಥ ಭೀ ಸುಣಗಾರ ಅವರು ಕಳೆದ ಹಲವು ವರ್ಷಗಳಿಂದ ರಾಜ್ಯದ ಕರಾವಳಿ ಮತ್ತು ಒಳನಾಡು ಮೀನುಗಾರರ ಸಮಸ್ಯೆಗಳ ಕುರಿತು ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿದ್ದಾರೆ. ಮೀನುಗಾರ ಸಮುದಾಯದ ಶಿಕ್ಷಣ, ಉದ್ಯೋಗ, ವಸತಿ, ಸಾಮಾಜಿಕ ಭದ್ರತೆ ಹಾಗೂ ರಾಜಕೀಯ ಸಬಲೀಕರಣಕ್ಕಾಗಿ ಅನೇಕ ಹೋರಾಟಗಳು, ಸಭೆಗಳು ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿ ಜನಮನ ಗೆದ್ದಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೀನುಗಾರ ಸಮುದಾಯದ ಸಭೆಗಳನ್ನು ಆಯೋಜಿಸಿ, ಸರ್ಕಾರದ ವಿವಿಧ ಯೋಜನೆಗಳು ಸಮುದಾಯಕ್ಕೆ ತಲುಪುವಂತೆ ಶ್ರಮಿಸಿರುವ ಅವರು, ಮೀನುಗಾರ ಯುವಕರಿಗೆ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ವಿಶೇಷವಾಗಿ ಮೀನುಗಾರ ಮಹಿಳೆಯರ ಸ್ವಾವಲಂಬನೆಗಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಪ್ರೋತ್ಸಾಹ ನೀಡಿರುವುದು ಗಮನಾರ್ಹವಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮೀನುಗಾರರ ವಿಭಾಗವನ್ನು ಸಂಘಟಿತವಾಗಿ ಬಲಪಡಿಸುವಲ್ಲಿ ಮಂಜುನಾಥ ಭೀ ಸುಣಗಾರ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಕಾಂಗ್ರೆಸ್ ಪಕ್ಷದ ತತ್ವಗಳನ್ನು ಜನರಿಗೆ ತಲುಪಿಸುವ ಜೊತೆಗೆ ಮೀನುಗಾರ ಸಮುದಾಯವನ್ನು ರಾಜಕೀಯವಾಗಿ ಜಾಗೃತಗೊಳಿಸುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮೀನುಗಾರ ಸಮುದಾಯದ ವಿವಿಧ ಸಮಸ್ಯೆಗಳ ಕುರಿತು ರಾಜ್ಯ ಸರ್ಕಾರದ ಗಮನ ಸೆಳೆಯಲು ಹಲವು ಹೋರಾಟಗಳನ್ನು ನಡೆಸಿ, ಮೀನುಗಾರರ ಬದುಕಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳು ದೊರಕಿಸುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ. ಮೀನುಗಾರರಿಗೆ ಸಾಲ ಸೌಲಭ್ಯ, ಮೀನುಗಾರಿಕಾ ಅಭಿವೃದ್ಧಿ ಯೋಜನೆಗಳು, ಮೀನುಗಾರರ ಮಕ್ಕಳಿಗೆ ವಿದ್ಯಾರ್ಥಿವೇತನ, ಮೀನುಗಾರ ಮಹಿಳೆಯರಿಗೆ ಸ್ವಸಹಾಯ ಯೋಜನೆಗಳು ಸೇರಿದಂತೆ ಅನೇಕ ಬೇಡಿಕೆಗಳನ್ನು ಸರ್ಕಾರದ ಮುಂದೆ ಮಂಡಿಸಿ ಪರಿಹಾರ ದೊರಕಿಸುವ ಕೆಲಸ ಮಾಡಿದ್ದಾರೆ.
ರಾಜ್ಯದ ಹಲವಾರು ಪತ್ರಿಕೆಗಳು ಹಾಗೂ ಮಾಧ್ಯಮಗಳಲ್ಲಿ ಮಂಜುನಾಥ ಭೀ ಸುಣಗಾರ ಅವರ ಸಾಮಾಜಿಕ ಹಾಗೂ ಸಂಘಟನಾ ಕಾರ್ಯಗಳಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಮೀನುಗಾರ ಸಮುದಾಯದ ಪರವಾಗಿ ನಡೆಸಿದ ಹೋರಾಟಗಳು, ಸಮಾಜಮುಖಿ ಸೇವೆಗಳು ಹಾಗೂ ರಾಜಕೀಯ ಚಟುವಟಿಕೆಗಳ ಕುರಿತು ಅನೇಕ ವರದಿಗಳು ಪ್ರಕಟಗೊಂಡಿವೆ. ಇದರಿಂದ ರಾಜ್ಯದಾದ್ಯಂತ ಅವರಿಗೆ ಅಪಾರ ಜನಬೆಂಬಲ ಮತ್ತು ಗೌರವ ದೊರೆತಿದೆ.
ಮೀನುಗಾರ ಸಮುದಾಯದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಂಜುನಾಥ ಭೀ ಸುಣಗಾರ ಅವರು ಸರಳತೆ, ಪ್ರಾಮಾಣಿಕತೆ ಹಾಗೂ ಹೋರಾಟದ ಮನೋಭಾವದಿಂದ ಜನರ ವಿಶ್ವಾಸ ಗಳಿಸಿದ್ದಾರೆ. ಸಮಾಜದ ಎಲ್ಲ ವರ್ಗಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಅವರು ಬಡ, ಹಿಂದುಳಿದ ಹಾಗೂ ದುರ್ಬಲ ವರ್ಗಗಳ ಪರವಾಗಿ ಸದಾ ನಿಲ್ಲುವ ನಾಯಕನಾಗಿ ಗುರುತಿಸಿಕೊಂಡಿದ್ದಾರೆ.
ಮೀನುಗಾರ ಸಮುದಾಯಕ್ಕೆ ರಾಜಕೀಯವಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಧಾನ ಪರಿಷತ್ತಿನಲ್ಲಿ ಸಮುದಾಯದ ಪ್ರಬಲ ಪ್ರತಿನಿಧಿತ್ವ ಅಗತ್ಯವಿದೆ. ಆ ನಿಟ್ಟಿನಲ್ಲಿ ಮಂಜುನಾಥ ಭೀ ಸುಣಗಾರ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವುದರಿಂದ ಲಕ್ಷಾಂತರ ಮೀನುಗಾರ ಕುಟುಂಬಗಳ ಆಶಯಗಳಿಗೆ ಬಲ ಸಿಗಲಿದೆ ಎಂದು ಸಂಘಟನೆಗಳ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.
ಹೀಗಾಗಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಹಾಗೂ ಹೈಕಮಾಂಡ್ ಮಂಜುನಾಥ ಭೀ ಸುಣಗಾರ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಿ ಮೀನುಗಾರ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಲಾಗಿದೆ.

BIJAPUR NEWS bjp public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.