ವಿಜಯಪುರ: ಗವಿಸಿದ್ದಪ್ಪ ಅಂಗಡಿ ಅವರನ್ನು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಸಂಸ್ಥೆ(ಎನ್.ಸಿ.ಟಿ.ಇ) ದಕ್ಷಿಣ ವಲಯ ಸಮಿತಿಗೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಬಿ.ಎಲ್.ಡಿ.ಇ ಸಂಸ್ಥೆಯ ಜೆ.ಎಸ್.ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ 2006 ರಿಂದ 2017ರ ವರೆಗೆ ಸಹಾಯಕ ಪ್ರಾಧ್ಯಾಪಕರಾಗಿ ಅವರು ಸೇವೆ ಸಲ್ಲಿಸಿದ್ದರು. ಸದ್ಯಕ್ಕೆ ಅವರು ಗುಜರಾತ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಎನ್.ಸಿ.ಟಿ.ಇ ದಕ್ಷಿಣ ವಲಯ ಸಮಿತಿಗೆ ನಾಮನಿರ್ದೇಶಿತ ಸದಸ್ಯರಾಗಿ ನೇಮಕವಾಗಿರುವ ಗವಿಸಿದ್ದಪ್ಪ ಅಂಗಡಿ ಅವರಿಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಮತ್ತು ಜೆ. ಎಸ್. ಎಸ್ ಶಿಕ್ಷಣ ಮಹಾವಿದ್ಯಾಲಯದ ಎಲ್ಲ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
Related Posts
Add A Comment