Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೃತದೇಹವನ್ನಿಟ್ಟು ಪ್ರತಿಭಟನೆ: ಆರೋಪಿಗಳನ್ನು ಬಂಧಿಸುವಂತೆ ಒತ್ತಾಯ
(ರಾಜ್ಯ ) ಜಿಲ್ಲೆ

ಮೃತದೇಹವನ್ನಿಟ್ಟು ಪ್ರತಿಭಟನೆ: ಆರೋಪಿಗಳನ್ನು ಬಂಧಿಸುವಂತೆ ಒತ್ತಾಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಾಲುಮತ ಸಮುದಾಯದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಮದರಿ ವಿರುದ್ಧ ಗಂಭೀರ ಆರೋಪ

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ತಾಲೂಕಿನ ನಾಗರಬೆಟ್ಟ ಗ್ರಾಮದ ದಲಿತ ಸಮುದಾಯದ ರವಿಚಂದ್ರ ಮಾದರ ಈತನನ್ನು ಬ.ಬಾಗೇವಾಡಿ ತಾಲೂಕಿನ ಹಂಗರಗಿ ಕ್ರಾಸ್ ಬಳಿಯ ಎನ್.ಎಸ್. ಪೂಜಾರಿ ಕಂಪನಿ ಪ್ಲಾಂಟ್ ಎದುರು ಪೂರ್ವನಿಯೋಜಿತ ಭೀಕರ ಹತ್ಯೆಗೈದ ಅಪರಾಧಿಗಳನ್ನು ಕೂಡಲೇ ಬಂಧಿಸಿ ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಇಲ್ಲಿನ ವಿವಿಧ ದಲಿತಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮೃತದೇಹವನ್ನಿಟ್ಟು ರಸ್ತಾ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಈ ವೇಳೆ ಡಿಎಸ್‌ಎಸ್ ಮುಖಂಡ ಹರೀಶ್ ನಾಟೆಕಾರ ಮಾತನಾಡಿ, ೪ವರ್ಷಗಳ ಕಾಲ ದುಡಿಸಿಕೊಂಡು ಮರ್ಮಾಂಗವೇ ಇಲ್ಲದಂತೆ ಕ್ರೂರವಾಗಿ ಹತ್ಯೆ ಮಾಡಿರುವದು ಹೇಯ ಕೃತ್ಯ. ಸಮಾಜದ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ ಮದರಿ ಅವರು ಇಂತಹ ಕೃತ್ಯ ಮಾಡುತ್ತಿರುವದು ಇದು ಎರಡನೇ ಬಾರಿ. ಘಟನೆಯ ಬಳಿಕ ನಾನು ಸಿಎಂ ನ ಆಪ್ತ, ನೀವು ದಲಿತರು ನನಗೆ ಏನೂ ಮಾಡಲು ಸಾಧ್ಯವಿಲ್ಲ ಎಂದು ಗರ್ವದಿಂದ ಹೇಳಿದ ಇವರಿಗೆ ನಾವು ಎಲ್ಲಿ ಹೋದರೂ ಬಿಡುವದಿಲ್ಲ. ಸೋಮವಾರದ ವರೆಗೆ ಪೊಲೀಸ್ ಇಲಾಖೆಗೆ ಗಡುವು ನೀಡುತ್ತೇವೆ. ಅಲ್ಲಿಯವರೆಗೆ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲದೇ ಹೋದಲ್ಲಿ ಜಿಲ್ಲೆಯಾಧ್ಯಂತ ಬಂದ್ ಕರೆ ನೀಡುವದಾಗಿ ಎಚ್ಚರಿಕೆ ನೀಡುತ್ತ, ಆತ್ಮಹತ್ಯೆ ಮಾಡಿಕೊಂಡಾದರೂ ಮೃತನ ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇವೆ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದರು.
ಪ್ರಮುಖರಾದ ಸಿ.ಜಿ.ವಿಜಯಕರ, ಬಾಲಚಂದ್ರ ಹುಲ್ಲೂರ, ತಿಪ್ಪಣ್ಣ ದೊಡಮನಿ ಮತ್ತೀತರರು ಮಾತನಾಡಿದರು. ಸುಮಾರು ಹೊತ್ತು ಮೃತ ದೇಹವಿದ್ದ ಅಂಬುಲೆನ್ಸ್ ಎದುರು ಹೋರಾಟಗಾರರು ದಿಕ್ಕಾರ ಕೂಗುತ್ತ, ಕೂಡಲೇ ಎಲ್ಲ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು.
ಎಲ್ಲ ಆರೋಪಿಗಳ ಬಂಧನವಾಗುವವರೆಗೆ ಮೃತದೇಹದ ಅಂತ್ಯ ಸಂಸ್ಕಾರ ಮಾಡುವದಿಲ್ಲ ಎಂದು ಪಟ್ಟು ಹಿಡಿದಿದ್ದರು. ಇದರಿಂದ ವಾಹನ ಸಂಚಾರದಲ್ಲಿ ಸಾಕಷ್ಟು ಅಡಚಣೆ ಉಂಟಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಇಲ್ಲಿನ ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಬಸ್ ಸೇರಿದಂತೆ ಇನ್ನೀತರ ವಾಹನಗಳಲ್ಲಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಯಾಣಿಕರು ಇರುತ್ತಾರೆ ಎಂದು ಪ್ರತಿಭಟನಾಕಾರರನ್ನು ಮನವೊಲಿಸುತ್ತಿದ್ದಂತೆಯೇ, ಹಿರಿಯ ಹೋರಾಟಗಾರರು ತಕ್ಷಣ ಸ್ಪಂದಿಸಿ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಬರುವ ದಿನಗಳಲ್ಲಿ ಹೋರಾಟವನ್ನು ಉಗ್ರವಾಗಿಸುವದಾಗಿ ಎಚ್ಚರಿಕೆ ನೀಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಪ್ರತಿಭಟನೆಯಲ್ಲಿ ಪ್ರಮುಖ ಹೋರಾಟಗಾರರಾದ ಬಸವರಾಜ ಸಿದ್ದಾಪೂರ, ಮಾರುತಿ ಸಿದ್ದಾಪೂರ, ಶೇಕು ಮಾದರ, ಶಿವು ಶಿವಪೂರ ಸೇರಿದಂತೆ ನೂರಾರು ಜನ ಭಾಗಿಯಾಗಿದ್ದರು.

ಏನಿದು ಘಟನೆ

ಬಸವನ ಬಾಗೇವಾಡಿ ತಾಲೂಕಿನ ಹಂಗರಗಿ ಗ್ರಾಮದ ಕ್ರಾಸ್ ಬಳಿ ಇರುವ ಎನ್.ಎಸ್. ಪೂಜಾರಿ ಕಂಪನಿ ಪ್ಲಾಂಟ್ ಎದುರು ಮೃತ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿ, ಪ್ರಕರಣವನ್ನು ಮುಚ್ಚಿ ಹಾಕಲು ನೇಣು ಹಾಕಲಾಗಿದೆ. ಈ ಹಿನ್ನೆಲೆ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ೧೪ ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿತರನ್ನು ಬಂಧಿಸಬೇಕಾದ ಬಾಗೇವಾಡಿ ಪೊಲೀಸರು ತಮ್ಮ ಕಾರ್ಯದಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂಬುದು ಹೋರಾಟಗಾರರ ಆರೋಪ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.